ಬೆಂಗಳೂರು: ವಿಶ್ವದ ಜನಪ್ರಿಯ ನಾಯಕರಾದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಶುಕ್ರವಾರದಿಂದ ಅಕ್ಟೋಬರ್ 7ರವರೆಗೆ ಸೇವೆ ಮತ್ತು ಸಮರ್ಪಣೆ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲೂ ಆಚರಿಸಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಶ್ರೀ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.
ಬೆಂಗಳೂರು ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಈ ಅಭಿಯಾನದಲ್ಲಿ ಆಸ್ಪತ್ರೆಗಳಲ್ಲಿ ಹಣ್ಣು ವಿತರಣೆ, ರಕ್ತದಾನ ಶಿಬಿರಗಳನ್ನು ಸಂಘಟಿಸಲಾಗುತ್ತಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರ್ಪಡಿಸಲಾಗುತ್ತದೆ. ಅಲ್ಲದೆ, ನದಿಗಳ ಪ್ಲಾಸ್ಟಿಕ್ ಹೆಕ್ಕುವ ಕಾರ್ಯವನ್ನೂ ನಡೆಸಲಾಗುವುದು ಎಂದು ಅರುಣ್ ಸಿಂಗ್ ಹೇಳಿದರು.
ಕೋವಿಡ್ ಲಸಿಕೆ ಎಲ್ಲರಿಗೂ ತಲುಪುವಂತೆನೋಡಿಕೊಳ್ಳಲಾಗುವುದು. ಬಡಜನರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಧಾನಿಯವರ ವ್ಯಕ್ತಿತ್ವದ ಕುರಿತು ಜನರಿಗೆ ತಿಳಿಸಲು ಪ್ರದರ್ಶಿನಿಗಳನ್ನು ಏರ್ಪಡಿಸಲಾಗುತ್ತದೆ ಎಂದು ವಿವರಿಸಿದರು.
ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು 30ರಿಂದ 40 ವರ್ಷಗಳ ಕಾಲ ಪಕ್ಷವನ್ನು ಕಟ್ಟಿದ ಹಿರಿಯ ನಾಯಕರಾಗಿದ್ದು, ಅವರ ರಾಜ್ಯ ಪ್ರವಾಸಕ್ಕೆ ಪಕ್ಷದ ಅನುಮತಿ ಬೇಕಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರ ರಾಜೀನಾಮೆಗೆ ಕಾಂಗ್ರೆಸ್ಸಿಗರು ಒತ್ತಾಯಿಸುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಶ್ರೀ ಅರುಣ್ ಸಿಂಗ್ ಅವರು, ಕಾಂಗ್ರೆಸ್ ವಿಚಾರಹೀನವಾಗಿದೆ. ಯಾವುದೇ ವಿಷಯಗಳಿಲ್ಲದೆ ಏನಾದರೂ ಮಾತನಾಡುವ ಪಕ್ಷದ ಮುಖಂಡರು ಅಲ್ಲಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ತಿಳಿಸಿದರು.
ಇದನ್ನು ಓದಿ:ಪಿಎಂ ಮೋದಿ ಜನ್ಮದಿನದಂದು ಹುಟ್ಟಿದ ಮಗುವಿಗೆ 'ನರೇಂದ್ರ' ಎಂದು ನಾಮಕರಣ