ETV Bharat / state

ಕಾಂಗ್ರೆಸ್ ನವರು ಗೂಂಡಾಗಿರಿ ರಾಜಕಾರಣ ಮಾಡುತ್ತಿದ್ದಾರೆ : ನಳಿನ್ ಕುಮಾರ್ ಕಟೀಲ್ - ಈಟಿವಿ ಭಾರತ ಕನ್ನಡ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್​ ಗೂಂಡಾಗಿರಿ ರಾಜಕಾರಣ ಆರಂಭವಾಗಿದೆ. ರಾಜ್ಯದ ವಿವಿದೆಡೆ ಹಲ್ಲೆ ಮುಂತಾದ ಘಟನೆಗಳು ನಡೆದಿವೆ. ನಾವು ಇದನ್ನು ಖಂಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

bjp-state-president-nalin-kumar-katil-slams-congress
ಕಾಂಗ್ರೆಸ್ ನವರು ಗೂಂಡಾಗಿರಿ ರಾಜಕಾರಣ ಮಾಡುತ್ತಿದ್ದಾರೆ : ನಳಿನ್ ಕುಮಾರ್ ಕಟೀಲ್
author img

By

Published : May 16, 2023, 5:21 PM IST

ಕಾಂಗ್ರೆಸ್ ನವರು ಗೂಂಡಾಗಿರಿ ರಾಜಕಾರಣ ಮಾಡುತ್ತಿದ್ದಾರೆ : ನಳಿನ್ ಕುಮಾರ್ ಕಟೀಲ್

ಹೊಸಕೋಟೆ (ಬೆಂಗಳೂರು ಗ್ರಾಮಾಂತರ) : ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಕಾಂಗ್ರೆಸ್​ನಿಂದ ಗೂಂಡಾಗಿರಿ ರಾಜಕಾರಣ ಪ್ರಾರಂಭವಾಗಿದೆ. ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಚುನಾವಣೆಯ ಫಲಿತಾಂಶದ ಪ್ರಕಟವಾದ ನಾಲ್ಕೇ ತಾಸಿನಲ್ಲಿ ಮನೆ ಮುಂದೆ ಪಟಾಕಿ ಹೊಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ, ಹೊಸಕೋಟೆಯ ಡಿ.ಶೆಟ್ಟಿಹಳ್ಳಿಯಲ್ಲಿ ಕೃಷ್ಣಪ್ಪ ಎಂಬ ವ್ಯಕ್ತಿಯ ಕೊಲೆ ಮಾಡಲಾಗಿತ್ತು. ಮೃತ ಕೃಷ್ಣಪ್ಪರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಬಿಜೆಪಿ ಪಕ್ಷದ ಮುಖಂಡರು ಅವರ ಮನೆಗೆ ಭೇಟಿ ನೀಡಿದರು. ಭೇಟಿಯ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಅಶ್ವತ್ಥ್ ನಾರಾಯಣ್ ಹಾಗೂ ಈಶ್ವರಪ್ಪ, ಮಾಜಿ ಸಚಿವ ಭೈರತಿ ಬಸವರಾಜ್ ಮತ್ತು ಎಂಟಿಬಿ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಯಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ನವರು ಗೂಂಡಾಗಿರಿ ರಾಜಕಾರಣ ಪ್ರಾರಂಭಿಸಿದ್ದಾರೆ. ದ್ವೇಷ ರಾಜಕಾರಣ ಶುರುವಾಗಿದೆ. ಹೊಸಕೋಟೆಯನ್ನು ಮಿನಿ ಬಿಹಾರ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಹಲ್ಲೆಗಳು, ಕೊಲೆಗಳು, ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಚುನಾವಣಾ ಫಲಿತಾಂಶ ಪ್ರಕಟವಾದ ದಿನ ಮನೆ ಮುಂದೆ ಪಟಾಕಿ ಹೊಡೆಯುವ ವಿಚಾರಕ್ಕೆ ಡಿ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಕೃಷ್ಣಪ್ಪ ಎಂಬವರ ಕೊಲೆ ಮಾಡಲಾಗಿದೆ. ಅಲ್ಲದೆ ಈ ವೇಳೆ ಜಗಳ ಬಿಡಿಸಲು ಹೋದ ಮಗನ ಮೇಲೆ ಹಾಗೂ ಅವರ ಕೃಷ್ಣಪ್ಪ ಅವರ ಪತ್ನಿ ಮೇಲೂ ಹಲ್ಲೆ ನಡೆಸಲಾಗಿದೆ. ಇದನ್ನು ಭಾರತೀಯ ಜನತಾ ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

ಮೊನ್ನೆಯಿಂದ ಕಾಂಗ್ರೆಸ್​ನಲ್ಲಿ ಅಧಿಕಾರದ ಚುಕ್ಕಾಣಿಗಾಗಿ ಹೋರಾಟ ನಡೆಯುತ್ತಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಮುಖಂಡರು ಕಿತ್ತಾಟ ಮಾಡುತ್ತಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ಚರ್ಚಿಸಲು ಮುಖಂಡರೆಲ್ಲರೂ ದೆಹಲಿಯಲ್ಲಿದ್ದಾರೆ. ಇಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುಂಡಾಗಿರಿ ಪ್ರವೃತ್ತಿಯನ್ನು ಮುಂದುವರೆಸಿದ್ದಾರೆ. ನಿನ್ನೆ ಯಾದಗಿರಿಯಲ್ಲೂ, ಶಿವಮೊಗ್ಗ, ಭಟ್ಕಳದಲ್ಲೂ ಇಂತಹ ಘಟನೆಗಳು ನಡೆದಿದೆ. ದಿಉ ಕಾಂಗ್ರೆಸ್​ ಸರ್ಕಾರ ಬಂದರೆ ಏನು ಏನಾಗುತ್ತದೆ ಎಂಬ ಸಂದೇಶವನ್ನು ನೀಡುತ್ತದೆ. ಇದನ್ನೆಲ್ಲ ನೋಡುತ್ತಿದ್ದರೆ ಜಂಗಲ್ ರಾಜ್ಯವನ್ನು ನೆನಪಿಸುತ್ತಿದೆ. ನಮ್ಮ ಪಕ್ಷ ಈ ರೀತಿಯ ಕೃತ್ಯಗಳನ್ನು ಖಂಡಿಸುತ್ತದೆ. ನಮ್ಮ ಕಾರ್ಯಕರ್ತರು ಧೃತಿಗೆಡುವ ಅಗತ್ಯ ಇಲ್ಲ. ಇದಕ್ಕೆ ತಕ್ಕದಾದ ಉತ್ತರವನ್ನು ಕೊಡುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ನಾಯಕರು ಪರಿಸ್ಥಿತಿಯನ್ನ ಹತೋಟಿಗೆ ತರಬೇಕು. ಪೊಲೀಸರು ಕೈಕಟ್ಟಿ ಕುಳಿತುಕೊಳ್ಳದೆ ದುಷ್ಕರ್ಮಿಗಳನ್ನ ಬಂಧಿಸಬೇಕು ಒತ್ತಾಯಿಸಿದರು.

ಯನಗುಂಟದಲ್ಲಿ ಅಂಬೇಡ್ಕರ್​ ಪುತ್ಥಳಿಗೆ ಹಾನಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿ, ಯನಗುಂಟ ಗ್ರಾಮದಲ್ಲಿ ಅಂಬೇಡ್ಕರ್​ ಪುತ್ಥಳಿಗೆ ಹಾನಿ ಮಾಡಲಾಗಿದೆ. ಇದರಿಂದ ಕಾಂಗ್ರೆಸ್​ ದಲಿತ ವಿರೋಧಿ, ಅಂಬೇಡ್ಕರ್​ ವಿರೋಧಿ ಎಂದು ಗೊತ್ತಾಗುತ್ತದೆ ಎಂದು ಕಟೀಲ್​ ಆರೋಪಿಸಿದರು.

ಇದನ್ನೂ ಓದಿ : ವರಿಷ್ಠರಿಂದ ಪ್ರತಿಪಕ್ಷ ನಾಯಕರ ಆಯ್ಕೆ.. ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ: ಪ್ರಹ್ಲಾದ್ ಜೋಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.