ಬೆಂಗಳೂರು: ಕರ್ನಾಟಕ ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡುವ ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಕೈ ಜೋಡಿಸಲಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಸಿರವಾರ ಹೇಳಿದ್ದಾರೆ.
ಆರ್.ಟಿ ನಗರದಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಬಿಜೆಪಿ ಯುವ ಮೋರ್ಚಾ ನಿಯೋಗ ಭೇಟಿ ನೀಡಿತು. ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡುವ ಸರ್ಕಾರದ ನಿಲುವನ್ನು ಸ್ವಾಗತಿಸಿ ಅಭಿಯಾನದ ಮೂಲಕ ಜಾಗೃತಿ ಮೂಡಿಸಿ ಗೃಹ ಇಲಾಖೆಗೆ ಸಾಥ್ ನೀಡುವುದಾಗಿ ಮನವಿ ಪತ್ರ ನೀಡಿತು.
ನಂತರ ಮಾತನಾಡಿದ ಡಾ.ಸಂದೀಪ್ ಕುಮಾರ ಸಿರವಾರ,
ಕಳೆದ ಕೆಲವು ದಿನಗಳಿಂದ ರಾಜ್ಯದ ನೆಮ್ಮದಿ ಮತ್ತು ಹೆಸರನ್ನು ಕೆಡಿಸಿದ್ದ ಮಾದಕ ವಸ್ತು ಸೇವನೆ ಮತ್ತು ಮಾರಾಟ ಜಾಲದ ವಿರುದ್ಧ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ಅತ್ಯಂತ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಡ್ರಗ್ ಮಾಫಿಯಾವನ್ನು ರಾಜ್ಯದಲ್ಲಿ ನಿರ್ಮೂಲನೆ ಮಾಡಲು ಪಣ ತೊಟ್ಟಿರುವುದು ಅತ್ಯಂತ ಶ್ಲಾಘನೀಯ. ಇಂತಹ ಮಾಫಿಯಾದಲ್ಲಿ ತೊಡಗಿರುವವರನ್ನು ಸದೆಬಡಿಯಲು ಅತ್ಯಂತ ಕಟ್ಟುನಿಟ್ಟಾದ ಕ್ರಮ ಜರುಗಿಸಿದ್ದಾ ಕ್ಕಾಗಿ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ರಾಜ್ಯದ ಪೊಲೀಸ್ ಇಲಾಖೆಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಅಭಿನಂದನೆ ಸಲ್ಲಿಸುತ್ತದೆ ಎಂದರು.
ಗಾಂಜಾ, ಕೊಕೇನ್, ಹೆರಾಯಿನ್ ನಂತಹ ಮಾದಕ ವಸ್ತುಗಳು ಯುವಜನತೆಯಲ್ಲಿ ಇತ್ತೀಚೆಗೆ ವ್ಯಾಪಕವಾಗಿ ಬಳಕೆಯಾಗುತ್ತಿದ್ದು , ಯುವಜನತೆಯ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತಿದೆ. ಇದೇ ರೀತಿ ತಮ್ಮ ಕಠಿಣ ಕಾರ್ಯ ಮುಂದುವರೆಸಿ ಈ ಮಾಫಿಯಾದಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದ್ರು.
ರಾಜ್ಯಾದ್ಯಂತ ಯುವ ಮೋರ್ಚಾ ವತಿಯಿಂದ 30 ಜಿಲ್ಲಾ ಕೇಂದ್ರಗಳಲ್ಲಿ ಮನವಿ ಪತ್ರವನ್ನು ಜಿಲ್ಲಾ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೀಡಲಾಯಿತು. ಮುಂದಿನ ದಿನಗಳಲ್ಲಿ ಸಮಾಜದ ಗಣ್ಯವ್ಯಕ್ತಿಗಳು ಸ್ವಾಮೀಜಿಗಳು, ವರ್ತಕರು, ಶಿಕ್ಷಣ ತಜ್ಞರು, ಸಾಹಿತಿಗಳು, ಕೈಗಾರಿಕಾ ಉದ್ಯಮಿಗಳು, ವೈದ್ಯರು ಈ ಅಭಿಯಾನದಲ್ಲಿ ಕಿರಿದಾದ ಸಿನಿಮಾ ಹಾಗೂ ಡಿಜಿಟಲ್ ಪೋಸ್ಟರ್ ರಚನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಮೂಲಕ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದಡಿಯಲ್ಲಿ ಕಾರ್ಯಕ್ರಮಗಳನ್ನು ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಡ್ರಗ್ ಮುಕ್ತ ರಾಜ್ಯ ನಿರ್ಮಾಣಕ್ಕೆ ಸರ್ಕಾರಕ್ಕೆ ಬಿಜೆಪಿ ಯುವ ಮೋರ್ಚಾ ಸಂಪೂರ್ಣ ಸಹಕಾರ: ಡಾ.ಸಂದೀಪ್ ಕುಮಾರ್ ಸಿರವಾರ - ಯುವ ಮೋರ್ಚಾ ವತಿಯಿಂದ 30 ಜಿಲ್ಲಾ ಕೇಂದ್ರಗಳಲ್ಲಿ ಮನವಿ ಪತ್ರ
ಇಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿತು. ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡುವ ಸರ್ಕಾರದ ನಿಲುವನ್ನು ಸ್ವಾಗತಿಸಿ ಅಭಿಯಾನದ ಮೂಲಕ ಜಾಗೃತಿ ಮೂಡಿಸಿ ಗೃಹ ಇಲಾಖೆಗೆ ಸಾಥ್ ನೀಡುವುದಾಗಿ ಮನವಿ ಪತ್ರ ನೀಡಿತು.