ಬೆಂಗಳೂರು: ಸ್ನಾನದ ಮನೆಯಲ್ಲಿ ಬಿಎಂಟಿಸಿ ಬಸ್ ನಿರ್ವಾಹಕಿ ಸಾವನ್ನಪ್ಪಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ಅನಸೂಯ (41) ಎಂಬುವರು ಸ್ನಾನ ಮಾಡುವ ವೇಳೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಶಯ ಇದ್ದು, ಮಹಿಳೆ ಬಿಎಂಟಿಸಿ ಬಸ್ ನಿರ್ವಾಹಕಿಯಾಗಿ ಕೆಲಸ ಮಾಡುತ್ತಿದ್ದರು.
ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.