ಬೆಂಗಳೂರು: ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಹಿನ್ನೆಲೆ ಚೆನ್ನಕೇಶವಸ್ವಾಮಿ ದೇವರಿಗೆ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡರು ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪಟ್ಟಣದ ಚೆನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗೌಡರು ನಾಮಪತ್ರವನ್ನು ದೇವರ ಸನ್ನಿಧಿಯಲ್ಲಿ ಇಟ್ಟು ಪೂಜೆ ಮಾಡಿದ್ರು. ಪತ್ನಿ ಮಗ ಸೇರಿದಂತೆ ಕುಟುಂಬ ಸಮೇತ ದೇವಸ್ಥಾನಕ್ಕೆ ಆಗಮಿಸಿದ.ಬಚ್ಚೇಗೌಡರುತಮ್ಮ ಮನೆ ದೇವರಾದ ಚನ್ನಕೇಶವ ಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿದ ಬಳಿಕ ಇಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಾಮಪತ್ರವನ್ನು ಸಲ್ಲಿಸಿದರು.