ETV Bharat / state

ಫಾರ್ಮಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ.. ಮೂವರ ಸ್ಥಿತಿ ಗಂಭೀರ

author img

By

Published : Mar 1, 2023, 4:37 PM IST

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ - ಮೂವರು ಕಾರ್ಮಿಕರ ಸ್ಥಿತಿ ಗಂಭೀರ.

ಫಾರ್ಮಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ
ಫಾರ್ಮಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ
ಫಾರ್ಮಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ

ಆನೇಕಲ್: ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟಗೊಂಡು ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. 'ಬಾಲ್ ಫಾರ್ಮಾ' ಕೆಮಿಕಲ್ ಕಾರ್ಖಾನೆಯ ಎರಡನೇ ಸೆಕ್ಟರ್​ನಲ್ಲಿ ಬಾಯ್ಲರ್ ಒತ್ತಡ ಹೆಚ್ಚಾದಾಗ ಒತ್ತಡ ಡಿಸ್ಚಾರ್ಜ್ ಮಾಡಬೇಕಾಗಿತ್ತು. ಆದರೆ, ಪ್ರೆಸರ್ ಡಿಸ್ಚಾರ್ಜ್ ಮಾಡದ ಕಾರಣ ಏಕಾಏಕಿ ಪ್ರೆಸರ್ ಹೆಚ್ಚಾಗಿ ಬಾಯ್ಲರ್ ಸಿಡಿದಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಕಾರ್ಮಿಕರಾಗಿದ್ದ ಪ್ರದೀಪ್, ಮುರುಗನ್ ಮತ್ತು ಕಿರಣ್ ಬಿ ಸಿ ಕೆಮಿಕಲ್ ಸಿಡಿತದಿಂದ ಸುಟ್ಟಗಾಯಗಳಾಗಿ ಕೂಡಲೇ ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ‌ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ‌ ನಡೆಸಿ ತನಿಖೆ‌ ಮುಂದುವರೆಸಿದ್ದಾರೆ.

ಬೇಕರಿ ಮಾಲೀಕ ಪೆಟ್ರೋಲಿಗೆ ಕಾಸು ಕೊಟ್ಟಿಲ್ಲವೆಂದು ಗ್ರಾಹಕನ ಉದ್ಧಟತನ (ಬೆಂಗಳೂರು): ನಗರದಲ್ಲಿ ಅಂಗಡಿ ಮಾಲೀಕರ ಮೇಲೆ ದಿನದಿಂದ ದಿನಕ್ಕೆ ಪುಂಡರ ಪೌರುಷ ಪ್ರದರ್ಶನ ಮುಂದುವರೆದಿದೆ. ಹೆಚ್ಎಎಲ್, ಜ್ಞಾನಭಾರತಿ, ಬಾಣಸವಾಡಿ ಬಳಿಕ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಮಾಳಗಾಳದಲ್ಲಿ ಮತ್ತದೇ ಮಾದರಿಯ ಪ್ರಕರಣ ಮರುಕಳಿಸಿದೆ. ಪೆಟ್ರೋಲ್ ಹಾಕಿಸಲು ಹಣ ಕೊಡಲಿಲ್ಲವೆಂದು ಗ್ರಾಹಕನೊಬ್ಬ ಬೇಕರಿ ಮಾಲೀಕನ ಮೇಲಿನ ಸಿಟ್ಟಿಗೆ ಬೇಕರಿಯ ಗಾಜುಗಳನ್ನು ಒಡೆದು ದಾಂಧಲೆ ನಡೆಸಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ಮಾಳಗಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೇಕರಿ ಮಾಲೀಕನ ಮೇಲಿನ ಕೋಪಕ್ಕೆ ಅಂಗಡಿಯ ಗಾಜುಗಳನ್ನ ಪುಡಿ ಮಾಡಿರುವ ಆರೋಪ ಪ್ರಕಾಶ್ ಎಂಬಾತನ ವಿರುದ್ಧ ಕೇಳಿಬಂದಿದೆ.

ಇದನ್ನೂ ಓದಿ : ಪರಮೇಶ್ವರ್ ವಿರುದ್ಧ ಅವಹೇಳನಕಾರಿ ವಿಡಿಯೋ ಪ್ರಸಾರ: ತನಿಖೆ ಚುರುಕುಗೊಳಿಸಿದ ಪೊಲೀಸರು

ಮಾಳಗಾಳ ಬಳಿ ಇರುವ ಬೇಕರಿಯೊಂದರ ದೈನಂದಿನ ಗ್ರಾಹಕನಾಗಿದ್ದ ಪ್ರಕಾಶ್, ನಿನ್ನೆ ಮಧ್ಯಾಹ್ನ ಬೇಕರಿ ಮಾಲೀಕನ ಬಳಿ ಪೆಟ್ರೋಲ್ ಹಾಕಿಸಲು ಹಣ ಬೇಕಿದೆ ಎಂದು ಕೇಳಿದ್ದಾನೆ. ಸಾಲ ನೀಡಲು ಹಣವಿಲ್ಲ ಎಂದು ಪ್ರಕಾಶನಿಗೆ ಬೇಕರಿ ಮಾಲೀಕ ರಘುನಾಥ್ ತಿಳಿಸಿದ್ದಾರೆ‌. ಇದಾದ ನಂತರ ತಡರಾತ್ರಿ ರಘುನಾಥ್ ವಾಸವಿರುವ ಮನೆ ಬಳಿ ಚಾಕು ಸಮೇತ ಬಂದಿದ್ದ ಆರೋಪಿ ಇದೇ ವಿಚಾರವಾಗಿ ಗಲಾಟೆ ಆರಂಭಿಸಿದ್ದಾನೆ.

ತಕ್ಷಣ ಒಟ್ಟಾದ ಅಕ್ಕಪಕ್ಕದವರು ಆರೋಪಿಗೆ ಬೈದು ಸ್ಥಳದಿಂದ ಕಳುಹಿಸಿದ್ದಾರೆ. ಆದರೆ ಇಂದು ಬೆಳಗ್ಗೆ 7 ಗಂಟೆಗೆ ಪುನಃ ಬೇಕರಿ ಬಳಿ ಬಂದಿದ್ದ ಆರೋಪಿ, ಬೇರೆಯವರಿಗಾದರೆ ಹಣ ಕೊಡುತ್ತೀಯಾ, ನನಗೆ ಕೊಡುವುದಿಲ್ಲವೇ? ಎಂದು ಮರದ ತುಂಡಿನಿಂದ ಬೇಕರಿ ಗಾಜುಗಳನ್ನು ಜಖಂಗೊಳಿಸಿ ಆವಾಜ್ ಹಾಕಿದ್ದಾನೆ. ಪುಂಡನ ಉಪಟಳದಿಂದ ಬೇಸತ್ತ ಬೇಕರಿ ಮಾಲೀಕ ರಘುನಾಥ್ ಶೆಟ್ಟಿ ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ : ಐದು ವರ್ಷಗಳ ಪ್ರೀತಿ, ಮದುವೆ ನಿರಾಕರಿಸಿದ ಯುವತಿ.. 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದ ಪಾಗಲ್​ ಪ್ರೇಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.