ನೆಲಮಂಗಲ: ಟೊಮೆಟೋ ಸಾಗಿಸುತ್ತಿದ್ದ ಬೊಲೆರೋ ಹಾಗೂ ಪಲ್ಸರ್ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಮಚೇನಹಳ್ಳಿ ಬಳಿ ಘಟನೆ ನಡೆದಿದೆ.
ಬೊಲೆರೋದಲ್ಲಿ ಟೊಮೆಟೋ ತುಂಬಿಕೊಂಡು ಮಾರುಕಟ್ಟೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮುಂಭಾಗದಿಮದ ಬಂದ ಪಲ್ಸರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನು ಅಪಘಾತ ಸಂಭವಿಸಲು ರಸ್ತೆ ತಿರುವು ಹಾಗೂ ಮಧ್ಯರಾತ್ರಿಯ ನಿದ್ದೆ ಮಂಪರು ಕಾರಣ ಎಂದು ಹೇಳಲಾಗುತ್ತಿದೆ. ಈ ಘಟನೆಯು ಡಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.