ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ ಉಡುಪಿನಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 53 ಲಕ್ಷ ರೂ. ಮೌಲ್ಯದ ಒಂದು ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ.
ಡಿಸೆಂಬರ್ 23 ರಂದು ದುಬೈನಿಂದ ಇಕೆ 568 ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಮೇಲೆ ಸಂಶಯ ಪಟ್ಟ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳು ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ.
ಆರೋಪಿಯಿಂದ 1013 ಗ್ರಾಂ ತೂಕದ 53,22,850 ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಒಳಉಡುಪಿನಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ: ಸಿಕ್ಕಿಬಿದ್ದ ಪ್ರಯಾಣಿಕ