ಬೆಂಗಳೂರು: ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ರುದ್ರೇಶ್, ನಿಖಿಲ್, ರವಿಚಂದ್ರ ಬಂಧಿತರು.
ಈ ಆರೋಪಿಗಳಿಂದ 2 ಲಕ್ಷದ 22 ಸಾವಿರ ರೂ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬೆಟ್ಟಿಂಗ್ ದಂಧೆ ಬಗ್ಗೆ ಮಾಹಿತಿ ಇದ್ದರೂ ಸ್ಥಳೀಯ ದೇವನಹಳ್ಳಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.