ನೆಲಮಂಗಲ: ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ಕಳ್ಳರು ಆಕೆ ಕೊರಳಲ್ಲಿದ್ದ ಮಾಂಗಲ್ಯದ ಸರ ಎಗರಿಸಿ ಪರಾರಿಯಾಗಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ನಿವಾಸಿ ಮಹಾದೇವಮ್ಮ(58) ಸರ ಕಳೆದುಕೊಂಡವರು. ಅವರು ಬೆಂಗಳೂರಿನ ವಿಜಯನಗರಕ್ಕೆ ತೆರಳುವ ಸಲುವಾಗಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದರು. ಈ ವೇಳೆ ಪಲ್ಸರ್ ಬೈಕ್ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರು ಸರ ಎಗರಿಸಿದ್ದಾರೆ. ಮೊದಲು ಆಕೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕೀಳುವ ಯತ್ನ ನಡೆಸಿದ್ದಾರೆ. ಈ ವೇಳೆ, ಮಹಾದೇವಮ್ಮ ಸರವನ್ನು ಬಲವಾಗಿ ಹಿಡಿದಿದ್ದ ಕಾರಣ ಸರ ತುಂಡಾಗಿ ಅರ್ಧದಷ್ಟು ಭಾಗ ಕಳ್ಳರ ಪಾಲಾಗಿದೆ.
ಮಹಿಳೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.