ETV Bharat / state

ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ.. ಸ್ವಾತಂತ್ರ್ಯೋತ್ಸವದಂದೇ 50ಕ್ಕೂ ಹೆಚ್ಚು ರೈತರು ಪೊಲೀಸರ ವಶಕ್ಕೆ - ಈಟಿವಿ ಭಾರತ್ ಕನ್ನಡ ನ್ಯೂಸ್

ಚನ್ನರಾಯಪಟ್ಟಣದಲ್ಲಿ ಕೈಗಾರಿಕೆಗೆ ಭೂಸ್ವಾಧೀನ ಮಾಡುವುದನ್ನು ವಿರೋಧಿಸಿ ರೈತರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಕ್ರೀಡಾಂಗಣಕ್ಕೆ ನುಗ್ಗಲು ಯತ್ನಿಸಿದ ಸುಮಾರು 50ಕ್ಕೂ ಅಧಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

channarayapatana-farmers-protest-against-land-acquisition
ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ. ರೈತರನ್ನು ವಶಕ್ಕೆ ಪಡೆದ ಪೊಲೀಸರು
author img

By

Published : Aug 15, 2022, 12:31 PM IST

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನ ವಿರೋಧಿಸಿ ಕಳೆದ 134 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು, ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮೌನ ಪ್ರತಿಭಟನೆ ಮಾಡುತ್ತ ಸ್ವಾತಂತ್ರ್ಯ ದಿನಾಚರಣೆಯ ವೇದಿಕೆಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ಸುಮಾರು 1777 ಎಕರೆ ಫಲವತ್ತಾದ ಜಮೀನುನನ್ನು ಕೈಗಾರಿಕಾಗಳ ಸ್ಥಾಪನೆಗಾಗಿ KIADB ಸ್ವಾಧೀನಕ್ಕೆ ಮುಂದಾಗಿತ್ತು. ಈ ಭೂಸ್ವಾಧೀನವನ್ನು ವಿರೋಧಿಸಿ ಕಳೆದ 134 ದಿನಗಳಿಂದ ರೈತರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಈ ಬಗ್ಗೆ ಆಗಸ್ಟ್ 15ರೊಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ಸ್ವಾತಂತ್ರ್ಯೋತ್ಸವ ದಿನವೇ ಕಪ್ಪುಪಟ್ಟಿ ಪ್ರದರ್ಶನ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದರು.

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ. ರೈತರನ್ನು ವಶಕ್ಕೆ ಪಡೆದ ಪೊಲೀಸರು

ಈ ಬೇಡಿಕೆ ಈಡೇರದ ಹಿನ್ನೆಲೆ ಇಂದು ಅನ್ನದಾತರು ರಾಷ್ಟ್ರಧ್ವಜ ಹಿಡಿದು ಮೌನ ಪ್ರತಿಭಟನೆ ನಡೆಸಿ, ಸ್ವಾತಂತ್ರ್ಯೋತ್ಸವದ ವೇದಿಕೆಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಾಗ ಪರಿಸ್ಥಿತಿಯನ್ನು ಹತೋಟಿಗೆ ತರಲು ಸುಮಾರು 50ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಬೆಳಗಾವಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ನವ್ಯಶ್ರೀ ರಾವ್ ಪೊಲೀಸರ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.