ನಾಳೆ 11 ಗಂಟೆ ತನಕ ತೆರೆದಿರಲಿವೆ ಮಾಂಸದಂಗಡಿಗಳು - ದೇವನಹಳ್ಳಿ ಲೇಟೆಸ್ಟ್ ನ್ಯೂಸ್
ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಮೇ 24 ಮತ್ತು ಮೇ 31ರ ಭಾನುವಾರದಂದು ನಿತ್ಯದ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದವುಗಳಿಗೆ ನಿಷೇಧಾಜ್ಞೆ ಅನ್ವಯಿಸಲಿದೆ.
ದೇವನಹಳ್ಳಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾಳೆ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಮಾತ್ರ ಮಾಂಸ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಮೇ 24 ಮತ್ತು ಮೇ 31ರ ಭಾನುವಾರದಂದು ನಿತ್ಯದ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದವುಗಳಿಗೆ ನಿಷೇಧಾಜ್ಞೆ ಅನ್ವಯಿಸಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಮಾತ್ರ ಕುರಿ, ಕೋಳಿ ಮಾಂಸ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಾಂಸ ಮತ್ತು ಕೋಳಿ ಮಾರಾಟ ಮಾಡುವ ಅಂಗಡಿ ಮಾಲೀಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು. ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.