ದೊಡ್ಡಬಳ್ಳಾಪುರ : ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯನ್ನು ಮಕ್ಕಳ ಸಹಾಯವಾಣಿ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ನಗರದ ಬಸವ ಭವನ ಮುಂದೆ 12 ವರ್ಷದ ಬಾಲಕಿ ಭಿಕ್ಷಾಟನೆ ಮಾಡುತ್ತಿದ್ದು, ಈ ಬಗ್ಗೆ ವಿಷಯ ತಿಳಿದ ಮಕ್ಕಳ ಸಹಾಯವಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನ ವಶಕ್ಕೆ ಪಡೆದಿದ್ದಾರೆ.
ವಶದಲ್ಲಿರುವ ಬಾಲಕಿಯ ತಂದೆ-ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ನಗರದ ಬೀದಿಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದಳು. ಈ ಬಗ್ಗೆ ದೂರು ಬಂದ ಹಿನ್ನೆಲೆ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.