ದೊಡ್ಡಬಳ್ಳಾಪುರ : ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆ ನಗರದಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.
ಅಪ್ಪು ಅಭಿಮಾನಿಗಳು ನಗರದ ಪ್ರಮುಖ ಸರ್ಕಲ್ಗಳಲ್ಲಿ ಪುನೀತ್ ಭಾವಚಿತ್ರಗಳಿಗೆ ಹೂವಿನ ಹಾರ ಹಾಕಿ ಅಗಲಿದ ನಟನಿಗೆ ಗೌರವ ನಮನ ಸಲ್ಲಿಸಿದರು.
ಇತ್ತ ನಗರ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಪ್ರದೇಶದಲ್ಲಿನ ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ತೆರವುಗೊಳಿಸಿ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.
ಇದನ್ನೂ ಓದಿ: ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ, ತಂದೆಯ ಬಯೋಪಿಕ್.. 'ರಾಜಕುಮಾರ'ನ ಕನಸುಗಳು ಕೈಗೂಡಲಿಲ್ಲ..