ETV Bharat / state

'ಕಾಂಗ್ರೆಸ್ ಮುಳುಗುತ್ತಿರುವ ಹಡುಗು, ಕರ್ನಾಟಕದಲ್ಲೂ ಠೇವಣಿ ಕಳೆದುಕೊಳ್ಳುತ್ತೆ' - ಡೀ ವಿಶ್ವವೇ ಮುಚ್ಚುವಂತೆ ನರೇಂದ್ರ ಮೋದಿ ಅಭಿವೃದ್ಧಿ ಕೆಲಸ

ದೇಶದಲ್ಲಿ ಕಾಂಗ್ರೆಸ್ ಈಗ ನಾಯಕತ್ವ ಇಲ್ಲದೆ ಮುಳುಗುತ್ತಿದೆ. ಕರ್ನಾಟಕದಲ್ಲಿ ಸ್ವಲ್ಪಮಟ್ಟಿಗೆ ಉಸಿರಾಡುತ್ತಿದೆ, ಇಲ್ಲ ಎಂದು ನಾನು ಹೇಳುವುದಿಲ್ಲ. ಆದರೆ, ಮುಂದಿನ ಚುನಾವಣೆ ನಂತರ ಇದೂ ಸಹ ಕೊನೆಗೊಳ್ಳಲಿದೆ ಎಂದು ಬಿಎಸ್​ವೈ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Apr 21, 2022, 6:37 PM IST

Updated : Apr 21, 2022, 6:54 PM IST

ದೊಡ್ಡಬಳ್ಳಾಪುರ: ಕಾಂಗ್ರೆಸ್ ರಾಷ್ಟ್ರದಲ್ಲಿ ಮುಳುಗುತ್ತಿರುವ ಹಡಗು. ಕರ್ನಾಟಕದಲ್ಲಿ ಅಲ್ಪಸ್ವಲ್ಪ ಉಸಿರಾಡುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಇಲ್ಲೂ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ದೇವನಹಳ್ಳಿಯ ಖಾಸಗಿ ಶಾಲೆಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ಇಡೀ ವಿಶ್ವವೇ ಮುಚ್ಚುವಂತೆ ನರೇಂದ್ರ ಮೋದಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮೋದಿಯವರ ಸರ್ಕಾರ ಈ ದೇಶಕ್ಕೆ ಕೃಷಿ ಭದ್ರತೆ, ಹಣಕಾಸು ಭದ್ರತೆ, ಮುಂತಾದವುಗಳನ್ನು ತಂದಿದೆ ಎಂದರು.

ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದ ಬಿಜೆಪಿಯ ಕೆಲಸಗಳನ್ನು ರಾಜ್ಯದ ಮನೆ ಮನೆಗೆ ತಲುಪಿಸುವ ಕೆಲಸ ಮಾಡಲಿದ್ದೇವೆ. ರೈತರ ಸಾಲವನ್ನು ನಮ್ಮ ಸರಕಾರ ಮನ್ನಾ ಮಾಡಿದೆ. ರೈತರಿಗೆ ಕೇಂದ್ರ ಸರ್ಕಾರ 6 ಸಾವಿರ ರೂ. ನೆರವು ನೀಡಿದರೆ, ರಾಜ್ಯ ಸರ್ಕಾರ 4 ಸಾವಿರ ರೂ. ನೀಡುತ್ತಿದೆ ಎಂದರು.

ಇದನ್ನೂ ಓದಿ: ಕಮಿಷನ್​ ವಿಚಾರ ಮುಚ್ಚಿಹಾಕಲು ಹುಬ್ಬಳ್ಳಿ ಗಲಭೆ ದೊಡ್ಡದಾಗಿ ಬಿಂಬಿಸ್ತಿದ್ದಾರೆ: ಡಿಕೆಶಿ

Last Updated : Apr 21, 2022, 6:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.