ETV Bharat / state

ದಲಿತರ ಮೇಲೆ ದೌರ್ಜನ್ಯ ಆರೋಪ: ಪಿಎಸ್​ಐ​ ವಿರುದ್ಧ ಕೈ ನಾಯಕರ ಪ್ರತಿಭಟನೆ - ಈಟಿವಿ ಭಾರತ ಕನ್ನಡ

ಅನುಗೊಂಡನಹಳ್ಳಿ ಪೊಲೀಸ್ ಠಾಣೆ ಸಬ್ ​ಇನ್ಸ್​ಪೆಕ್ಟರ್​ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದೇ ದಲಿತರ ಮೇಲೆ ದೌರ್ಜನ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಇಂದು ಕೈ ನಾಯಕರು ಅವರ ವಿರುದ್ಧ ಬೃಹತ್​ ಪ್ರತಿಭಟನೆ ನಡೆಸಿದರು.

KN_BNGRURA
ಪಿಎಸ್​ಐ​ ವಿರುದ್ಧ ಕೈ ನಾಯಕರ ಪ್ರತಿಭಟನೆ
author img

By

Published : Nov 12, 2022, 9:28 PM IST

ಹೊಸಕೋಟೆ/ಬೆಂಗಳೂರು ಗ್ರಾಮಾಂತರ: ಪಿಎಸ್ಐ ಒಬ್ಬರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೇ ದಲಿತರ ಮೇಲೆ ದೌರ್ಜನ್ಯ ತೋರುತ್ತಿದ್ದು, ಆಡಳಿತ ಪಕ್ಷದ ಏಜೆಂಟ್​ ಆಗಿ ವರ್ತಿಸುತ್ತಿದ್ದಾರೆಂದು ಆರೋಪಿಸಿ ಶಾಸಕ ಶರತ್ ಬಚ್ಚೇಗೌಡ ಹಾಗೂ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಪಿಎಸ್​ಐ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನುಗೊಂಡನಹಳ್ಳಿ ಠಾಣೆಯ ಸಬ್ ​ಇನ್ಸ್​ಪೆಕ್ಟರ್​ ಸಂಗಮೇಶ್ ಮೇಟಿ ಸರ್ಕಾರಿ ಪೊಲೀಸ್ ಠಾಣೆಗೆ ಸಮಸ್ಯೆಗಳನ್ನು ಹೊತ್ತುತರುವ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದೇ ಆಡಳಿತ ಪಕ್ಷದ ಏಜಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ದಲಿತರ ಮೇಲೆ ದೌರ್ಜನ್ಯ ಹಾಗೂ ಮಹಿಳೆಯರಿಗೆ ಕೆಟ್ಟ ಪದಗಳಿಂದ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೈ ನಾಯಕರು ತಿರುಮಲಶೆಟ್ಟಹಳ್ಳಿ ಕ್ರಾಸ್​ನಿಂದ ಅನುಗೊಂಡನಹಳ್ಳಿ ಪೊಲೀಸ್ ಠಾಣೆವರೆಗೆ ಪ್ರತಿಭಟನೆ ರ‍್ಯಾಲಿ ನಡೆಸಿದರು.

ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಎಸ್.ಪಿ.‌ಪುರುಷೋತ್ತಮ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿಭಟನಾಕಾರರು ಅನುಗೊಂಡನಹಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕುನುಗ್ಗಲು ಉಂಟಾಗಿತ್ತು.

ನಂತರ ಶಾಸಕ‌ ಶರತ್ ಬಚ್ಚೇಗೌಡ, ಕೃಷ್ಣಬೈರೇಗೌಡ ಸೇರಿದಂತೆ ಪ್ರಮುಖ‌ ಕಾಂಗ್ರೆಸ್ ಮುಖಂಡರು ಪೊಲೀಸ್ ಠಾಣೆಗೆ ತೆರಳಿ ಪಿಎಸ್ಐ ಸಂಗಮೇಶ್ ವಿರುದ್ದ ಕ್ರಮ‌ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್.ಪಿ.ಮಲ್ಲಿಕಾರ್ಜುನ ಬಾಲದಂಡಿ ಪ್ರಕರಣ ಸಂಬಂಧ ಅಡಿಷ​ನಲ್ ಎಸ್.ಪಿ.ಪುರುಷೋತ್ತಮ್ ನೇತೃತ್ವದಲ್ಲಿ ತನಿಖೆ ಕೈಗೊಂಡು ಒಂದು ವಾರದೊಳಗೆ ಕ್ರಮ‌ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಧರ್ಮದೇಟು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.