ದೇವನಹಳ್ಳಿ: ದುಬೈನಿಂದ ಚಿನ್ನ ಕಳ್ಳ ಸಾಕಾಣಿಕೆ ಮಾಡುತ್ತಿದ್ದವರಿಗೆ ಸಹಕಾರ ಮಾಡುತ್ತಿದ್ದ ಆರೋಪದ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕಳೆದ ಬುಧವಾರ ದುಬೈನಿಂದ ಬರುವ ಎಮಿರೇಟ್ಸ್ ಫ್ಲೈಟ್ನಲ್ಲಿ ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿರುವ ಮಾಹಿತಿ ಬಂದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇಟ್ಟಿದ್ದರು. ಈ ವೇಳೆ ಇಬ್ಬರು ಮಹಿಳೆಯರು ಪದೇ ಪದೆ ಶೌಚಾಲಯಕ್ಕೆ ಹೋಗಿ ಬರುತ್ತಿದ್ದುದು ಗಮನಕ್ಕೆ ಬಂದಿದೆ. ಇಬ್ಬರನ್ನು ವಶಕ್ಕೆ ಪಡೆದು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಕಳ್ಳ ಸಾಕಾಣಿಕೆ ಮಾಡುತ್ತಿದ್ದ ಮಾಹಿತಿ ಬೆಳಕಿಗೆ ಬಂದಿದೆ.
![Cooperation with gold smuggling: Arrest of Kempegowda Airport Staff](https://etvbharatimages.akamaized.net/etvbharat/prod-images/kn-bng-01-coustms-av-7208821_12032021172930_1203f_1615550370_29.jpg)
ಬಂಧಿತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಆರೋಪಿಗಳಿಂದ 40 ಲಕ್ಷ ರೂ. ಮೌಲ್ಯದ 1 ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಮುಂದುವರೆದಿದೆ.