ಹೊಸಕೋಟೆ (ಬೆಂ.ಗ್ರಾಮಾಂತರ): ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಎರಡನೇ ಬಲಿಯಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 60 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ಸೋಂಕಿತ ಮಹಿಳೆ ಸಾವಿನ ಬಗ್ಗೆ ಮಾತನಾಡಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಹೊಸಕೋಟೆಯ ನಗರದಲ್ಲಿ ಸಾವನ್ನಪ್ಪಿದ 60 ವರ್ಷದ ಮಹಿಳೆಗೆ ಎದೆನೋವು ಮತ್ತು ಉಸಿರಾಟದ ತೊಂದರೆ ಎಂದು ಮಹಿಳೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಎದೆ ನೋವು ಇಲ್ಲ ಎಂದು ಜಯದೇವ ಆಸ್ಪತ್ರೆಯ ವೈದ್ಯರು ರಾಜೀವ್ ಗಾಂಧಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಆಸ್ಪತ್ರೆಯಲ್ಲಿ ಸೋಂಕು ಪರೀಕ್ಷೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ನಂತರ ಐಸೊಲೇಷನ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರು ಮನೆ ಹೊರಗೆ ಬರುವಾಗ ಕಡ್ದಾಯವಾಗಿ ಮಾಸ್ಕ್ ನ್ನು ಧರಿಸಿ, ದಯವಿಟ್ಟು ಓಡಾಡುವುದನ್ನು ಕಡಿಮೆ ಮಾಡಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸೋಂಕಿನಿಂದ ದೂರ ಇರುವಂತೆ ಶಾಸಕರು ಮನವಿ ಮಾಡಿದರು.