ದೇವನಹಳ್ಳಿ: ಸೀಮಾ ಸುಂಕ (ಕಸ್ಟಮ್ಸ್) ಅಧಿಕಾರಿಗಳೆಂದು ಹೇಳಿಕೊಂಡು ಬೆಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮತ್ತು ಜಪ್ತಿ ಆದ ಚಿನ್ನಾಭರಣವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಧನುಷ್ಯ ಅಲಿಯಾಸ್ ರಾಚೇಲ್ ಹಾಗೂ ಆಕೆಯ ಪತಿ ದಾರ್ಬಿನ್ ದಾಸ್ ಅಲಿಯಾಸ್ ಮೋಹನ್ ದಾಸ್ ಬಂಧಿತರು. ಇವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಾಗಿ ಕೆಲಸ ಮಾಡುತ್ತಿರುವುದಾಗಿ ಸಾರ್ವಜನಿಕರಿಗೆ ನಂಬಿಸಿ, ಏರ್ಪೋರ್ಟ್ನಲ್ಲಿ ಕೆಲಸ ಮತ್ತು ಸೀಜ್ ಆದ ಚಿನ್ನಾಭರಣಗಳನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ಆನಂತರ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದರು.
ಈ ಕುರಿತು ದೇವನಹಳ್ಳಿ ಮತ್ತು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈಶಾನ್ಯ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 34 ಲಕ್ಷ ರೂ. ನಗದು, 106.965 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:
ಸಾಲ ಕೊಡಿಸುವುದಾಗಿ ಪಂಗನಾಮ: ಮನೆ ಜಪ್ತಿಯ ಬ್ಯಾಂಕ್ ನೋಟಿಸ್ನಿಂದ ವಂಚನೆ ಬೆಳಕಿಗೆ
ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡಮಾನ ಇಟ್ಟು ವಂಚನೆ: ಮೂವರ ಗ್ಯಾಂಗ್ ವಶಕ್ಕೆ