ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ಬಹಳ ಅಭಿಮಾನವಿದೆ : ಸಚಿವ ಡಾ.ಕೆ. ಸುಧಾಕರ್ - ಬೆಂಗಳೂರಿನಲ್ಲಿ ಕೋವಿಡ್ ಕಡಿಮೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ಬಹಳ ಅಭಿಮಾನವಿದೆ. ಜನರ ಹಿತ ಕಾಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಬದಲಾವಣೆಯಿಂದ ಯಾವುದೇ ರೀತಿಯ ಅಭಿವೃದ್ಧಿಗೆ ಹಿನ್ನಡೆ ಆಗುವುದಿಲ್ಲ..
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಮೊದಲ ಬಾರಿಗೆ ಇಂದು ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ಬಹಳ ಅಭಿಮಾನ ಇದೆ ಎಂದರು.
ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ಬಹಳ ಅಭಿಮಾನವಿದೆ.
ಜನರ ಹಿತ ಕಾಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಬದಲಾವಣೆಯಿಂದ ಯಾವುದೇ ರೀತಿಯ ಅಭಿವೃದ್ಧಿಗೆ ಹಿನ್ನಡೆ ಆಗುವುದಿಲ್ಲ. ಮುಖ್ಯಮಂತ್ರಿಗಳು ತೀರ್ಮಾನ ಮಾಡಿದಂತೆ ನಮ್ಮ ಕರ್ತವ್ಯಗಳಲ್ಲಿ ನಿರತರಾಗಿದ್ದೇವೆ ಎಂದರು.
ಕೋವಿಡ್ ನಿಯಂತ್ರಣದ ಬಗ್ಗೆ ಮಾತನಾಡಿದ ಅವರು, ಕಳೆದ ನಾಲ್ಕು ದಿನದಿಂದ ಬೆಂಗಳೂರಿನಲ್ಲಿ ಕೋವಿಡ್ ಕಡಿಮೆ ಆಗಲು ಪ್ರಾರಂಭವಾಗಿದೆ. ಬೆಂಗಳೂರಿಗೆ ಹೋಲಿಕೆ ಮಾಡಿದರೆ ಬೇರೆ ಜಿಲ್ಲೆಗಳಲ್ಲಿ ಸ್ವಲ್ಪಮಟ್ಟದ ಏರಿಕೆಯಿದೆ. ಸಮಾಧಾನಕರ ವಿಷಯ ಅಂದ್ರೆ ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಶೇ.1 ರಿಂದ 2ರಷ್ಟು ಇರುವುದರಿಂದ ಯಾವುದೇ ಆತಂಕ ಇಲ್ಲ ಎಂದರು.
ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಒಮಿಕ್ರಾನ್ ಲಕ್ಷಣಗಳು ಬಹಳ ಮೃದುವಾಗಿವೆ. ಎರಡು ಅಲೆಗಿಂತ ಈ ಅಲೆಯಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ.
ಹೊಸ ಸೋಂಕಿತರಿಗಿಂತ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ 52 ಸಾವಿರ ಜನ ಗುಣಮುಖರಾಗಿದ್ದಾರೆ. 40 ಸಾವಿರಕ್ಕೂ ಹೆಚ್ಚು ಜನ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಎಂದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
TAGGED:
ಬೆಂಗಳೂರಿನಲ್ಲಿ ಕೋವಿಡ್ ಕಡಿಮೆ