ETV Bharat / state

ಸೋಂಕಿತರ ಸಂಖ್ಯೆ ಹೆಚ್ಚಳ: 'ರೆಡ್ ಝೋನ್' ಆದ ದೊಡ್ಡಬಳ್ಳಾಪುರ - Covid case increase in Doddaballapur

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ. ದೊಡ್ಡಬಳ್ಳಾಪುರದಲ್ಲಿ ಮಾತ್ರ ಸೋಂಕು ಹೆಚ್ಚಿದ್ದು, ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Doddaballapur
ದೊಡ್ಡಬಳ್ಳಾಪುರದಲ್ಲಿ ಕೋವಿಡ್​ ಸೋಂಕಿನ ಪ್ರಮಾಣ ಹೆಚ್ಚಳ
author img

By

Published : Jun 15, 2021, 11:43 AM IST

ದೊಡ್ಡಬಳ್ಳಾಪುರ: ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೋವಿಡ್​​​​​​​​​​​​ ಸೋಂಕಿನ ಶೇಕಡಾ 25ಕ್ಕಿಂತ ಹೆಚ್ಚಿದ್ದು, ರೆಡ್​​​ ಝೋನ್ ಎಂದು ಪರಿಗಣಿಸಲಾಗಿದೆ.

ತಾಲೂಕಿನಲ್ಲಿ ಕೊರೊನಾ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಕೋವಿಡ್​ ಸೋಂಕಿನ ಪ್ರಮಾಣ ಹೆಚ್ಚಳ

ಈ ಕುರಿತು ಮಾಹಿತಿ ನೀಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಮಾಣ ಶೇ. 10ಕ್ಕಿಂತ ಹೆಚ್ಚಿದೆ. ಆದ್ದರಿಂದ ಜುಲೈ 21ರವರೆಗೂ ಜಿಲ್ಲೆಯಲ್ಲಿ ಲಾಕ್​ಡೌನ್ ಮುಂದುವರೆಸಲಾಗಿದೆ. ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ. ದೊಡ್ಡಬಳ್ಳಾಪುರದಲ್ಲಿ ಮಾತ್ರ ಸೋಂಕು ಹೆಚ್ಚಿದ್ದು, ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ 30ರಿಂದ 35ರಷ್ಟು ಪಾಸಿಟಿವಿಟಿ ರೇಟ್ ಬರುತ್ತಿತ್ತು. ಈಗ ಕಡಿಮೆಯಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 10ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಬೆಳಗ್ಗೆ 8 ಗಂಟೆಯವರೆಗೆ ಮಾತ್ರ ತೆರೆದಿರಲಿದೆ. ನಿಯಮ ಉಲ್ಲಂಘಿಸಿದಲ್ಲಿ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ದಂಡ ವಿಧಿಸಲಿದ್ದಾರೆ ಎಂದರು.

ಇದನ್ನೂ ಓದಿ: ಅರಸೀಕೆರೆ: ಅಕ್ರಮ ಸಂಬಂಧ ಹಿನ್ನೆಲೆ ಹೆಂಡತಿ-ಅತ್ತೆಯ ಬರ್ಬರ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.