ETV Bharat / state

ನೆಲಮಂಗಲ ಕೋವಿಡ್ ಆಸ್ಪತ್ರೆಯಿಂದ ಸೋಂಕಿತ ಎಸ್ಕೇಪ್ - ನೆಲಮಂಗಲ ಕೋವಿಡ್ ಆಸ್ಪತ್ರೆ

ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಮುಂಜಾನೆ 5 ಗಂಟೆ ಸಮಯದಲ್ಲಿ ಹೊರ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Covid patient escaped
Covid patient escaped
author img

By

Published : Apr 17, 2021, 7:58 PM IST

ನೆಲಮಂಗಲ: ಕೋವಿಡ್ ಸೋಂಕಿತನೋರ್ವ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಆತ ಮನೆಗೂ ಹೋಗದೆ ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕೋವಿಡ್​ ಸೋಂಕಿತ ಎಸ್ಕೇಪ್ ಆಗುತ್ತಿರುವ ದೃಶ್ಯ

ನೆಲಮಂಗಲ ಸರ್ಕಾರಿ ಕೋವಿಡ್ ಆಸ್ಪತ್ರೆಗೆ 12/04/21ರಂದು ಕೋವಿಡ್ ಸೊಂಕಿತ ವೃದ್ಧನೋರ್ವ ಚಿಕಿತ್ಸೆ ಪಡೆಯಲು ದಾಖಲಾಗಿದ್ದ. ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯಲು ನಿರಾಕರಿಸುತ್ತಿದ್ದಾನೆ ಎಂಬ ಮಾಹಿತಿ ಇದ್ದು, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗದೇ ಪರಾರಿಯಾಗಿದ್ದಾನೆ.

ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಮುಂಜಾನೆ 5 ಗಂಟೆ ಸಮಯದಲ್ಲಿ ಹೊರ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪರಾರಿಯಾದ ವ್ಯಕ್ತಿ ಆಸ್ಪತ್ರೆ ಆವರಣದಲ್ಲಿ ಆಗಲಿ, ಆತನ ಮನೆಯಲ್ಲಿಯೂ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ನರಸಿಂಹಯ್ಯ, ಇದೇ ಮೊದಲ ಬಾರಿಗೆ ಇಂತಹ ಪ್ರಕರಣ ನಡೆದಿದೆ. ವಾಚ್​ಮ್ಯಾನ್​ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ಮುಂದೆ ಈ ರೀತಿಯ ಪ್ರಕರಣ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.

ಸೊಂಕಿತ ವ್ಯಕ್ತಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದ್ದು, ಮತ್ತಷ್ಟು ಜನರಿಗೆ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಸಂಬಂಧ ನೆಲಮಂಗಲ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.