ದೊಡ್ಡಬಳ್ಳಾಪುರ: ವಿದೇಶದಿಂದ ಆಗಮಿಸಿದ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಪರಾರಿಯಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದೇಶದಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜನವರಿ 3ರಂದು ಆತನನ್ನು ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅಂದು ಬೆಳಗ್ಗೆ 11 ಗಂಟೆಗೆ ಸೋಂಕಿತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 11.55ಕ್ಕೆ ಆಸ್ಪತ್ರೆಯಿಂದ ಸೋಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ.
32 ವರ್ಷದ ಸೋಂಕಿತ ಆಸ್ಪತ್ರೆಯ ಸಿಬ್ಬಂದಿಯ ಕಣ್ತಪ್ಪಿಸಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಸರ್ಕಾರ ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಸೋಂಕಿತನ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಳಗಾವಿಯ ಮೂಡಲಗಿಯಲ್ಲಿ ಹುಚ್ಚು ನರಿ ಕಚ್ಚಿ 22ಕ್ಕೂ ಹೆಚ್ಚು ದನ - ಕರುಗಳ ಸಾವು