ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಇನ್ನೊಂದೆಡೆ, ಎಣಿಕೆ ಕೇಂದ್ರದ ಬಳಿಯೇ ಹೂವಿನಮಾಲೆಗಳ ಭರ್ಜರಿ ಮಾರಾಟ ಶುರುವಾಗಿದೆ. ಸಾಮಾನ್ಯ ದಿನಗಳಲ್ಲಿ 50ರಿಂದ 100 ರೂಪಾಯಿಗೆ ಮಾರಾಟವಾಗುತ್ತಿದ್ದ ಹೂ ಮಾಲೆಗಳು ಇಂದು 200 ರಿಂದ 500 ರೂಪಾಯಿಗೆ ಮಾರಾಟವಾಗುತ್ತಿವೆ.
ಸ್ನೇಹಿತರು, ಬಂಧುಗಳು ಗೆದ್ದ ಅಭ್ಯರ್ಥಿಯ ಕೊರಳಿಗೆ ಹೂವಿನ ಮಾಲೆ ಹಾಕುವ ತಮ್ಮ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.
ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿಯೇ ಸುಮಾರು 10 ಲಕ್ಷ ರೂ ಮೌಲ್ಯದ ಹೂವಿನ ವಹಿವಾಟು ನಡೆಯುವ ಸಾಧ್ಯತೆ ಇದೆ.