ETV Bharat / state

ಎಂ.ಟಿ.ಬಿ ವಿರುದ್ಧ ಅವಹೇಳನಕಾರಿ ಪೋಸ್ಟ್​​: ವ್ಯಕ್ತಿ ಬಂಧನ, ಠಾಣೆಗೆ ಮುತ್ತಿಗೆ ಹಾಕಿದ ಕೈ ನಾಯಕರು

ಎಂ.ಟಿ.ಬಿ. ನಾಗರಾಜ್ ಅವರ ವಿರುದ್ಧ ಅವಹೇಳನಕಾರಿ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ವಿಷಯಕ್ಕೆ ಸಂಬಂಧಪಟ್ಟಂತೆ ಹರಳೂರಿನ ರವಿ ಎಂಬ ವ್ಯಕ್ತಿ ಬಂಧಿಸಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಹಾಗೂ ಕಾಂಗ್ರೆಸ್ ಬೆಂಬಲಿಗರು ಠಾಣೆ ಮುಂದೆ ಜಮಾಯಿಸಿದರು.

ಎಂ.ಟಿ.ಬಿ. ನಾಗರಾಜ್ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ಬಂಧನ, ಬಿಡುಗಡೆ
author img

By

Published : Nov 1, 2019, 7:57 AM IST

ಹೊಸಕೋಟೆ: ಫೇಸ್​ಬುಕ್​​ನಲ್ಲಿ ಅನರ್ಹ ಶಾಸಕ ಎಂ.ಟಿ.ಬಿ ನಾಗರಾಜ್​ ವಿರುದ್ಧ ಅವಹೇಳನಕಾರಿ ಪೋಸ್ಟ್​ ಹಂಚಿಕೊಂಡಿದ್ದ ವ್ಯಕ್ತಿಯನ್ನು ಇಲ್ಲಿನ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದರು.

ಎಂ.ಟಿ.ಬಿ. ನಾಗರಾಜ್ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ಬಂಧನ, ಬಿಡುಗಡೆ

ಹರಳೂರಿನ ರವಿ ಬಂಧಿತ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಹಾಗೂ ಕಾಂಗ್ರೆಸ್ ಬೆಂಬಲಿಗರು ಠಾಣೆ ಮುಂದೆ ಜಮಾಯಿಸಿದರು. ಈ ವೇಳೆ ಠಾಣೆಯ ಅಧಿಕಾರಿ ರಾಜು ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಸುದ್ದಿಯ ಆಧಾರದಲ್ಲಿ ಯಾರನ್ನೂ ಬಂಧಿಸಲಾಗುವುದಿಲ್ಲ. ಅವಹೇಳನಕಾರಿ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ವಿಷಯಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಕರೆದುಕೊಂಡು ಬರಲಾಗಿದೆ ಅಷ್ಟೇ, ನ್ಯಾಯಾಲಯದ ಆದೇಶವಿದ್ದರೆ ಮಾತ್ರ ಅವರನ್ನು ಬಂಧಿಸಬಹುದು. ರವಿಯನ್ನು ಕೇವಲ ವಿಚಾರಣೆಗಾಗಿ ಕರೆತಂದಿದ್ದೇವೆ ಎಂದು ತಿಳಿಸಿ ನಂತರ ರವಿಯನ್ನು ಬಿಡುಗಡೆ ಮಾಡಲಾಯಿತು.

ಬಳಿಕ ಶಾಸಕ ಬೈರತಿ ಸುರೇಶ್ ಮಾತನಾಡಿ, ಎಂ.ಟಿ.ಬಿ. ನಾಗರಾಜ್ ಅಧಿಕಾರಿಗಳಿಗೆ ಬೆದರಿಕೆ ಹಾಕಿ ನಮ್ಮ ಕಾರ್ಯಕರ್ತರನ್ನು ಅನವಶ್ಯಕವಾಗಿ ಬಂಧಿಸಿ, ಕಿರುಕುಳ ಕೊಡುತ್ತಿದ್ದಾರೆ. ರವಿ ತನಗೆ ಬಂದ ವಿಷಯವನ್ನು ಕೇವಲ ಫಾರ್ವಡ್ ಮಾಡಿದ್ದಾನೆ. ಅದಕ್ಕೆ ಅವನನ್ನು ಬಂಧಿಸಿ ಬಿಜೆಪಿಯವರು ತಾಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದು ಅದಕ್ಕೆ ತಮ್ಮ ಪಕ್ಷದ ಯಾವುದೇ ಕಾರ್ಯಕರ್ತ ಬೆದರುವುದಿಲ್ಲ. ಈ ಬಾರಿ ಬಿಜೆಪಿಯನ್ನು ತಾಲ್ಲೂಕಿನಿಂದ ಓಡಿಸುತ್ತೇವೆ' ಎಂದರು.

Intro:ಹೊಸಕೋಟೆ:

ಎಂ.ಟಿ.ಬಿ. ನಾಗರಾಜ್ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ಬಂಧನ, ಬಿಡುಗಡೆ

ಹರಳೂರಿನ ರವಿ ಎಂಬ ವ್ಯಕ್ತಿ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್ ಅವರ ವಿರುದ್ಧ ಅವಹೇಳನಕಾರಿ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ವಿಷಯಕ್ಕೆ ಸಂಬಂಧಪಟ್ಟಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ನೀಡಿದ ದೂರಿನ ಆಧಾರದಲ್ಲಿ ಇಲ್ಲಿನ ಪೊಲೀಸರು ರವಿಯನ್ನು ಬಂಧಿಸಿ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಹಾಗೂ ಕಾಂಗ್ರೆಸ್ ಬೆಂಬಲಿಗರು ಠಾಣೆ ಮುಂದೆ ಜಮಾಯಿಸಿದರು ಠಾಣೆಗೆ ಮುತ್ತಿಗೆ ಹಾಕಲು ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಬಂದರು.ಈ ವೇಳೆ ಠಾಣೆಯ ಅಧಿಕಾರಿ ರಾಜು ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಸುದ್ದಿಯ ಆಧಾರದಲ್ಲಿ ಯಾರನ್ನೂ ಬಂಧಿಸಲಾಗುವುದಿಲ್ಲ.
ಅವಹೇಳನಕಾರಿ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ವಿಷಯಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಕರೆದುಕೊಂಡು ಬರಲಾಗಿದೆ ಅಷ್ಟೇ, ನ್ಯಾಯಾಲಯದ ಆದೇಶವಿದ್ದರೆ ಮಾತ್ರ ಅವರನ್ನು ಬಂಧಿಸಬಹುದು. ರವಿಯನ್ನು ಕೇವಲ ವಿಚಾರಣೆಗಾಗಿ ಕರೆತಂದಿದ್ದೇವೆ ಎಂದು ತಿಳಿಸಿ ನಂತರ ರವಿಯನ್ನು ಬಿಡುಗಡೆ ಮಾಡಲಾಯಿತು.

Body:ಶಾಸಕ ಬೈರತಿ ಸುರೇಶ್ ಮಾತನಾಡಿ, ಎಂ.ಟಿ.ಬಿ. ನಾಗರಾಜ್ ಅಧಿಕಾರಿಗಳಿಗೆ ಬೆದರಿಕೆ ಹಾಕಿ ನಮ್ಮ ಕಾರ್ಯಕರ್ತರನ್ನು ಅನವಶ್ಯಕವಾಗಿ ಬಂಧಿಸಿ, ಕಿರುಕುಳ ಕೊಡುತ್ತಿದ್ದಾರೆ. ರವಿ ತನಗೆ ಬಂದ ವಿಷಯವನ್ನು ಕೇವಲ ಫಾರ್ವಡ್ ಮಾಡಿದ್ದಾನೆ. ಅದಕ್ಕೆ ಅವನನ್ನು ಬಂಧಿಸಿ ಬಿಜೆಪಿಯವರು ತಾಲ್ಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದು ಅದಕ್ಕೆ ತಮ್ಮ ಪಕ್ಷದ ಯಾವುದೇ ಕಾರ್ಯಕರ್ತ ಬೆದರುವುದಿಲ್ಲ. ಈ ಬಾರಿ ಬಿಜೆಪಿಯನ್ನು ತಾಲ್ಲೂಕಿನಿಂದ ಓಡಿಸುತ್ತೇವೆ' ಎಂದರು.

Conclusion:ನಂತರ ಕಾಂಗ್ರೆಸ್‌ ಮುಖಂಡ
ತಿರುರಂಗ ನಾರಾಯಣ ಸ್ವಾಮಿ
ಮಾತನಾಡಿ, ಎಂಟಿಬಿ ಅವರು
ನಮ್ಮ ಕಾಂಗ್ರೆಸ್‌ ಪಕ್ಷದ ಮುಖಂಡರಿಗೆ‌ ಹಾಗೂ ಕಾರ್ಯಕರ್ತರಿಗೆ ಇಲ್ಲ ಸಲ್ಲದ
ದೂರುಗಳನ್ನು ಹಾಕಿ ಪೊಲೀಸರ ಮೂಲಕ ಕೇಸ್ ಗಳನ್ನು ಹಾಕಿ ಬೆದರಿಕೆ ಹಾಕುತ್ತಿದ್ದಾರೆ ಇದಕ್ಕೆ ಕಾಂಗ್ರೆಸ್‌ ಪಕ್ಷದವರು ಯಾರು ಭಯ ಬೀಳುವುದಿಲ್ಲ.ಇದಕೆಲ್ಲಾ ಮುಂದಿನ ದಿನಗಳಲ್ಲಿ ಜನರೆ ತಕ್ಕ ಪಾಠವನ್ನು ಕಳಿಸುತ್ತಾರೆ ಎಂದರು. ಯಾರು ಅವರ ವಿರುದ್ದ ಮಾತನಾಡುತಾರೋ ಅವರನ್ನು ಗುರಿಯಾಗಿಟ್ಟುಕೊಂಡು ಅವರ ವಿರುದ್ದ ಪೊಲೀಸರಿಂದ ಕೇಸ್ ಗಳನ್ನು ಹಾಕುತ್ತಿದ್ದಾರೆ ಎಂದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.