ದೊಡ್ಡಬಳ್ಳಾಪುರ: ಇಲ್ಲಿನ ಸೂಲುಕುಂಟೆ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಬೂಚನಹಳ್ಳಿ ಹನುಮಂತರಾಯಪ್ಪ (58) ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ದಿನಗಳಿಂದ ಮನೆಗೆ ಬಂದಿರಲಿಲ್ಲ ಎಂದು ಕುಟುಂಬಸ್ಥರು ಹುಡುಕಾಟ ನಡೆಸಿರುವುದಾಗಿ ತಿಳಿಸಿದ್ದಾರೆ.
ಇಂದು ದನ ಮೇಯಿಸಲು ಅರಣ್ಯಕ್ಕೆ ಹೋದವರಿಗೆ ಶವ ಕಾಣಿಸಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.