ದೇವನಹಳ್ಳಿ: ಏರ್ ಪೋರ್ಟ್ ರಸ್ತೆಯ ಟೋಲ್ ಬಳಿ ಸರ್ವಿಸ್ ರಸ್ತೆಗಾಗಿ ಆಗ್ರಹಿಸಿ ಗ್ರಾಮಸ್ಥರು ಟೋಲ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.
ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಬಳಿಯ ಟೋಲ್ಗೆ ಸುತ್ತಮುತ್ತಲಿನ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಟೋಲ್ ಸುತ್ತ ಮುತ್ತಲಿನ 5ಕಿ.ಮೀ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳಿಗೆ ಉಚಿತ ಪಾಸ್ ನೀಡಬೇಕು. ಸರ್ವಿಸ್ ರಸ್ತೆ ನೀಡಬೇಕು ಮತ್ತು ಹೆದ್ದಾರಿ ದಾಟಲು ಗ್ರಾಮಗಳ ಬಳಿ ಸ್ಕೈ-ವಾಕ್ ನಿರ್ಮಿಸಬೇಕೆಂದು ಆಗ್ರಹಿಸಿ ಟೋಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮುಂದಿನ 20 ದಿನದೊಳಗೆ ಗ್ರಾಮಸ್ಥರ ಮನವಿಯಂತೆ ಉಚಿತ ಪಾಸ್ ಮತ್ತು ಸರ್ವಿಸ್ ರಸ್ತೆ ನಿರ್ಮಿಸುವ ಭರವಸೆ ನೀಡಲಾಗಿದೆ. ಈ ಭರವಸೆ ಈಡೇರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.