ಬೆಂಗಳೂರು: ಪಿಯುಸಿ ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಿದ 16,000 ಉಪನ್ಯಾಸಕರಿಗೆ ಗೌರವ ಸಂಭಾವನೆಯನ್ನು ನೀಡದೆ ನಿರ್ಲಕ್ಷ್ಯ ವಹಿಸಿರುವ ಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದಿರುವ ದಿನೇಶ್ ಗುಂಡೂರಾವ್, ಎಸ್ಎಸ್ಎಲ್ಸಿ ಪರೀಕ್ಷೆ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ಈಗಾಗಲೇ ಗೌರವಧನ ಖಾತೆಗೆ ಜಮಾ ಆಗಿದೆ. ಆದರೆ ಪಿಯುಸಿ ಉಪನ್ಯಾಸಕರಿಗೆ ಮೌಲ್ಯಮಾಪನ ಆಗಿ 20 ದಿನ ಕಳೆದರು ಇನ್ನೂ ಹಣ ಪಾವತಿಸಿಲ್ಲ ಎಂದು ವಿವರಿಸಿದ್ದಾರೆ.
ತಕ್ಷಣ ಪಿಯುಸಿ ಬೋರ್ಡ್ನ ಅಧಿಕಾರಿಗಳು ಹಣ ಪಾವತಿಸಲು ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿ ಅವರ ಬಳಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕೂಡ ಇದ್ದು, ಈ ನಿಟ್ಟಿನಲ್ಲಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.