ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ, ಟ್ಯಾಕ್ಸಿ ಚಾಲಕರನ್ನ ಭೇಟಿ ಮಾಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲಕರ ಸಮಸ್ಯೆಗಳನ್ನ ಆಲಿಸಿದರು.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಐಎಲ್ಎ ಅಧಿಕಾರಿಗಳು ಕೆ.ಎಸ್.ಡಿ.ಟಿ.ಸಿ ಚಾಲಕರಿಗೆ ಪಾರ್ಕಿಂಗ್ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಚಾಲಕರು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲಕರನ್ನ ಭೇಟಿ ಮಾಡಿ ಸಮಸ್ಯೆ ಅಲಿಸಿದರು. ಬಿಐಎಎಲ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಚಾಲಕರ ಸಮಸ್ಯೆ ಬಗೆಹರಿಸುವಂತೆ ಹೇಳಿದರು. ಇದೇ ಸಮಯದಲ್ಲಿ 500 ಕ್ಕೂ ಚಾಲಕರು ಟ್ಯಾಕ್ಸಿ ಚಾಲಕರು ಜಮಾಯಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿ-5 ನಲ್ಲಿ ಕೆಎಸ್ ಟಿಡಿಸಿ ಕೌಂಟರ್ ಪ್ರಾರಂಭವಾಗಿದ್ದು, ಪ್ರಾರಂಭದಲ್ಲಿ ಕೆಎಸ್ ಟಿಡಿಸಿಯ 400 ವಾಹನಗಳಿಗೆ ಪಾರ್ಕಿಂಗ್ ನೀಡಲಾಗಿತ್ತು. ನಂತರ 200 ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ನೀಡಲಾಗಿದ್ದು, ಹಂತ ಹಂತವಾಗಿ ಕಡಿಮೆ ಮಾಡುತ್ತಾ ಈಗ 30 ವಾಹನಗಳಿಗೆ ಮಾತ್ರ ಪಾರ್ಕಿಂಗ್ ವ್ಯವಸ್ಥೆ ಇದೆ, ಬಿಐಎಎಲ್ ಅಧಿಕಾರಿಗಳು ಖಾಸಗಿ ಸಂಸ್ಥೆಗಳಾದ ಓಲಾ ಮತ್ತು ಉಬರ್ ವಾಹನಗಳಿಗೆ ಅವಕಾಶ ಮಾಡಿಕೊಡುವ ಕಾರಣಕ್ಕೆ ಪಾರ್ಕಿಂಗ್ ನಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಚಾಲಕರ ಆರೋಪವಾಗಿದೆ.
ಇದನ್ನೂ ಓದಿ: ಸಂಸದರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು