ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ನಾಳೆ ತಹಶೀಲ್ದಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯಲಿದ್ದು, ಗ್ರಾಮಸ್ಥರ ಸಮಸ್ಯೆಗಳನ್ನ ಸ್ಥಳದಲ್ಲೇ ಪರಿಹರಿಸುವ ಕಾರ್ಯಕ್ರಮ ತಾಲೂಕು ಆಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಜನರ ಮನೆ ಬಾಗಿಲಿಗೆ ಆಡಳಿತ ತರುವ ಯೋಜನೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ, ನಾಳೆ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರ್ ಮೋಹನ್ ಕುಮಾರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಹಳ್ಳಿಗರ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಮಾಡುವಲಾಗುವುದು.
ಈಗಾಗಲೇ ಗ್ರಾಮಸ್ಥರಿಂದ ಅರ್ಜಿಗಳನ್ನ ಪಡೆಯಲಾಗಿದ್ದು, ನಾಳೆ ನಡೆಯುವ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಸ್ಥಳದಲ್ಲೇ ಜನರ ಸಮಸ್ಯೆಗಳನ್ನ ಪರಿಹಾರಿಸಲಾಗುವುದು, ಹಾಡೋನಹಳ್ಳಿಯ ಕೃಷಿ ವಿಜ್ಞಾನಿ ಕೇಂದ್ರ ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಿದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸೌಲಭ್ಯಗಳ ಮಳಿಗೆ, ಸಂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಹಶೀಲ್ದಾರ್ ಮೋಹನ್ ಕುಮಾರಿ ತಿಳಿಸಿದರು.
ಇದನ್ನೂ ಓದಿ: ರಣಜಿ ಟ್ರೋಫಿ : ಪದಾರ್ಪಣೆ ಪಂದ್ಯದಲ್ಲೇ ತ್ರಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಬಿಹಾರದ ಸಕಿಬುಲ್ ಗನಿ