ETV Bharat / state

ಕೃಷಿ ಉತ್ಪನ್ನ ಮಾರುಕಟ್ಟೆ ಚುನಾವಣೆ: ಕೊನೆಕ್ಷಣದಲ್ಲಿ ಹಿಂದೆ ಸರಿದ ಜೆಡಿಎಸ್​​​​​​​​​​!

author img

By

Published : Jun 20, 2020, 12:14 AM IST

Updated : Jun 20, 2020, 8:34 AM IST

ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ಅಧ್ಯಕ್ಷರಾಗಿ ವಿಶ್ವನಾಥ ರೆಡ್ಡಿ, ಉಪಾಧ್ಯಕ್ಷರಾಗಿ ಮಂಜುನಾಥ ರವರು ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ವಿಶ್ವನಾಥ ರೆಡ್ಡಿ
ನೂತನ ಅಧ್ಯಕ್ಷ ವಿಶ್ವನಾಥ ರೆಡ್ಡಿ

ದೊಡ್ಡಬಳ್ಳಾಪುರ : ಒಟ್ಟು 16 ಸಂಖ್ಯಾಬಲವನ್ನ ಹೊಂದಿರುವ ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಅಚ್ಚರಿಯಾಗಿದೆ.

ಈ ಮೊದಲು ಕಾಂಗ್ರೆಸ್ ಹಿರಿಯ ಮುಖಂಡ, ಎಪಿಎಂಸಿ ಸದಸ್ಯ ಗೋವಿಂದರಾಜು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ವಿಶ್ವನಾಥ್ ರೆಡ್ಡಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ನೂತನ ಅಧ್ಯಕ್ಷ ವಿಶ್ವನಾಥ ರೆಡ್ಡಿ

ಇನ್ನೂ ಜೆಡಿಎಸ್​ನಿಂದ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದ ಬಿ.ವಿ ಲೋಕೇಶ್ ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಹೀಗಾಗಿ ವಿಶ್ವನಾಥ್ ರೆಡ್ಡಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಶ್ವನಾಥ್ ಮಾತನಾಡಿ, ಎಪಿಎಂಸಿಯ ಎಲ್ಲ ಸದಸ್ಯರ ಬೆಂಬಲದಿಂದ ನಾನು ಆಯ್ಕೆಯಾಗಿದ್ದೇನೆ. ಮುಂದೆ ರೈತರು-ವರ್ತಕರು ಮಧ್ಯೆ ಇರುವ ಸಮಸ್ಯೆಗಳು, ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಕಾಟಕ್ಕೆ ಇತಿಶ್ರೀ ಹಾಡಿ ಎಪಿಎಂಸಿಯ ಅಭಿವೃದ್ಧಿಗೆ ಶ್ರಮಿಸಲಿದ್ದೇನೆ ಎಂದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್​ನ ಎಲ್ಲ ಹಿರಿಯ ನಾಯಕರ ಮಾತಿನಂತೆ ಗೋವಿಂದರಾಜು ಹಿಂದೆ ಸರಿದಿದ್ದಾರೆ. ವಿಶ್ವನಾಥ್ ಆಯ್ಕೆಯಲ್ಲಿ ಯಾರಿಗೂ ಅಸಮಾಧಾನವಿಲ್ಲ. ಎಪಿಎಂಸಿ ಅಭಿವೃದ್ಧಿಗೆ ವಿಶ್ವನಾಥ್ ರೆಡ್ಡಿಗೆ ನಾನು ಸಹಾಯ ಮಾಡುತ್ತೇನೆ ಎಂದು ಅಭಯ ನೀಡಿದರು.

Last Updated : Jun 20, 2020, 8:34 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.