ದೊಡ್ಡಬಳ್ಳಾಪುರ: ವೇಗವಾಗಿ ಬಂದ ಬೊಲೆರೋ ವಾಹನ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೂಗೇನಹಳ್ಳಿ ಗೇಟ್ ರಾಷ್ಟ್ರೀಯ ಹೆದ್ದಾರಿ 207 ರ ಬಳಿ ಘಟನೆ ನಡೆದಿದೆ.
ಘಟನೆಯಲ್ಲಿ ಬೊಲೆರೊ ವಾಹನ ಕ್ಲೀನರ್ ಗಂಗೇರೆಡ್ಡಿ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಕಡಪ ಜಿಲ್ಲೆಯ ನಿವಾಸಿಯಾಗಿದ್ದು, ವೇಗವಾಗಿ ಹೋಗುತ್ತಿದ್ದ ಬೊಲೆರೋ ವಾಹನ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಹಿಂಭಾಗ ಬೊಲೆರೋ ವಾಹನಕ್ಕೆ ತೂರಿ ಬಂದಿದ್ದು, ಬೊಲೆರೋದಲ್ಲಿ ಕುಳಿತ್ತಿದ್ದ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಶವದ ಹಿಂದೆ 50 ಲಕ್ಷ ರೂ.ಆಸ್ಪತ್ರೆ ಖರ್ಚಿನ ಕಹಾನಿ