ETV Bharat / state

ದೊಡ್ಡಬಳ್ಳಾಪುರ ಕೋವಿಡ್​ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ: ಮೆಚ್ಚುಗೆ ವ್ಯಕ್ತಪಡಿಸಿದ ನಗರಸಭೆ ಸಿಬ್ಬಂದಿ - Doddaballapura

ದೊಡ್ಡಬಳ್ಳಾಪುರದ ಕೋವಿಡ್ ಆಸ್ಪತ್ರೆ  ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುತ್ತಿದೆ ಎಂದು ನಗರಸಭೆ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ ಕೋವಿಡ್​ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ

author img

By

Published : Jul 29, 2020, 8:22 AM IST

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಕೋವಿಡ್​ ನಿಯಂತ್ರಣಕ್ಕಾಗಿ ಸರ್ಕಾರ ಶ್ರಮಿಸುತ್ತಿದ್ದರೂ ಕೆಲ ಖಾಸಗಿ ಆಸ್ಪತ್ರೆಗಳು ಹಣ ಮಾಡುವ ದಂಧೆಗೆ ಇಳಿದಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ, ದೊಡ್ಡಬಳ್ಳಾಪುರದ ಕೋವಿಡ್ ಆಸ್ಪತ್ರೆ ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ.

ದೊಡ್ಡಬಳ್ಳಾಪುರ ನಗರಸಭೆ ಸಿಬ್ಬಂದಿಯೊಬ್ಬರು ಕೊರೊನಾ ವಾರಿಯರ್​ ಆಗಿ ದುಡಿಯುತ್ತಿದ್ದರು. ಈ ಸಮಯದಲ್ಲಿ ಅವರಿಗೆ ಸೋಂಕು ತಗುಲಿದ್ದು, ಅವರನ್ನು ಇಲ್ಲಿನ ಕೋವಿಡ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿನ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಆರೈಕೆ ಕಂಡು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ ಕೋವಿಡ್​ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ

ಸೋಂಕಿತರಿಗೆ ಸರಿಯಾದ ಸಮಯಕ್ಕೆ ಆಹಾರದ ವ್ಯವಸ್ಥೆ ಜೊತೆಗೆ ಪ್ರತಿಯೊಬ್ಬರಿಗೂ ಪ್ರತ್ಯೇಕ ವಾರ್ಡ್​ ವ್ಯವಸ್ಥೆ ಮಾಡಲಾಗಿದೆ. ಉತ್ತಮ ಚಿಕಿತ್ಸೆ ಕೂಡ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.