ETV Bharat / state

ದೊಡ್ಡಬಳ್ಳಾಪುರ ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ನೂರೆಂಟು ವಿಘ್ನ - ದೊಡ್ಡಬಳ್ಳಾಪುರ ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ನೂರೆಂಟು ವಿಘ್ನ

ಅಕ್ಟೋಬರ್ 26 ರಂದು ನಗರಸಭೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆಯ್ಕೆಯಾಗಿ ಜನಪ್ರತಿನಿಧಿಗಳ ಕೈಗೆ ಅಧಿಕಾರ ಬಂತು, ನವೆಂಬರ್ 10 ರಂದು ನಗರಸಭೆಯ ನೂತನ ಕಟ್ಟಡ ಉದ್ಘಾಟನೆ ಮಾಡಿ ನೂತನ ಕಟ್ಟಡದಲ್ಲಿ ಮೊಟ್ಟ ಮೊದಲ ಸರ್ವ ಸದಸ್ಯರ ಸಾಮಾನ್ಯಸಭೆ ಮಾಡುವ ಆಸೆಯನ್ನ ನೂತನ ಸದಸ್ಯರಿಗೆ ಹೊಂದಿದ್ದರು.

ದೊಡ್ಡಬಳ್ಳಾಪುರ ನಗರಸಭೆ
ದೊಡ್ಡಬಳ್ಳಾಪುರ ನಗರಸಭೆ
author img

By

Published : Jan 26, 2022, 10:00 PM IST

ದೊಡ್ಡಬಳ್ಳಾಪುರ: ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ನೂರೆಂಟು ವಿಘ್ನ ಅನ್ನುವಂತಾಗಿದೆ. ಈಗಾಗಲೇ ಎರಡ್ಮೂರು ಬಾರಿ ಉದ್ಘಾಟನಾ ದಿನ ನಿಗದಿ ಮಾಡಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಲಾಗಿತ್ತು. ಆದರೆ ಕೋವಿಡ್, ಚುನಾವಣಾ ನೀತಿ ಸಂಹಿತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬದಲಾವಣೆಯಿಂದ ಮತ್ತೆ ಮತ್ತೆ ಉದ್ಘಾಟನಾ ಕಾರ್ಯಕ್ರಮ ಮೂಂದೂಡಲಾಗುತ್ತಿದೆ.

ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ನೂರೆಂಟು ವಿಘ್ನ

ಸುಮಾರು 4 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರ ನಗರಸಭೆಯ ನೂತನ ಭವ್ಯ ಕಟ್ಟಡ ತಲೆ ಎತ್ತಿದೆ. ಕಾಮಾಗಾರಿ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಸಿದ್ದವಾಗಿದೆ, ಕಟ್ಟಡ ಕಾಮಾಗಾರಿ ಪೂರ್ಣಗೊಂಡು ವರ್ಷಗಳೇ ಕಳೆದಿದ್ದು, ಆದರೆ ನಗರಸಭೆಯಲ್ಲಿ ಚುನಾಯಿತ ಸದಸ್ಯರು ಇಲ್ಲದ ಕಾರಣದಿಂದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಂತರ ಉದ್ಘಾಟನೆ ಮಾಡುವ ತೀರ್ಮಾನಕ್ಕೆ ಬರಲಾಗಿತ್ತು.

ಅಕ್ಟೋಬರ್ 26 ರಂದು ನಗರಸಭೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಆಯ್ಕೆಯಾಗಿ ಜನಪ್ರತಿನಿಧಿಗಳ ಕೈಗೆ ಅಧಿಕಾರ ಬಂತು, ನವೆಂಬರ್ 10 ರಂದು ನಗರಸಭೆಯ ನೂತನ ಕಟ್ಟಡ ಉದ್ಘಾಟನೆ ಮಾಡಿ ನೂತನ ಕಟ್ಟಡದಲ್ಲಿ ಮೊಟ್ಟ ಮೊದಲ ಸರ್ವ ಸದಸ್ಯರ ಸಾಮಾನ್ಯ ಸಭೆ ಮಾಡುವ ಆಸೆಯನ್ನ ನೂತನ ಸದಸ್ಯರಿಗೆ ಹೊಂದಿದ್ದರು.

ಅದರಂತೆ ನವೆಂಬರ್ 10 ರಂದು ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಎಂಟಿಬಿ ನಾಗರಾಜ್ ಅವರಿಂದ ಉದ್ಘಾಟನೆ ಮಾಡಲು ಸಕಲ ಸಿದ್ಧತೆ ಮಾಡಲಾಗಿತ್ತು. ಕಟ್ಟಡವನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಸಹ ಮಾಡಲಾಗಿತ್ತು. ಆದರೆ ಉದ್ಘಾಟನೆಯ ಮುನ್ನ ದಿನ ರಾಜ್ಯ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆ ಘೋಷಣೆ ಮಾಡಿದ ಹಿನ್ನಲೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಉದ್ಘಾಟನಾ ದಿನವನ್ನು ಮುಂದೂಡಲಾಗಿತ್ತು.

ಮತ್ತೇ ಜನವರಿ 26ರ ಗಣರಾಜ್ಯೋತ್ಸವ ದಿನದಂದು ನೂತನ ನಗರಸಭೆ ಕಟ್ಟಡದ ಉದ್ಘಾಟನಾ ದಿನ ನಿಗದಿ ಮಾಡಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಗಳ ಬದಲಾವಣೆಯಾದ ಹಿನ್ನೆಲೆ ಮತ್ತೆ ಉದ್ಘಾಟನಾ ದಿನ ಮೂಂದೂಡಲಾಗಿದೆ. ಡಾ. ಕೆ. ಸುಧಾಕರ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರೊಂದಿಗೆ ಚರ್ಚಿಸಿ ನಗರಸಭೆ ನೂತನ ಕಟ್ಟಡ ಉದ್ಘಾಟನೆ ಮಾಡುವುದಾಗಿ ಶಾಸಕರಾದ ಟಿ ವೆಂಕಟರಮಣಯ್ಯ ಹೇಳಿದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.