ETV Bharat / state

ದೊಡ್ಡಬೆಳವಂಗಲಾ ಕೊಲೆ ಪ್ರಕರಣ : ಕೂಡಲೇ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಎಂ.ಟಿ.ಬಿ.ನಾಗರಾಜ್ ಸೂಚನೆ

ದೊಡ್ಡಬೆಳವಂಗಲಾ ಗ್ರಾಮದಲ್ಲಿ ಯುವಕರಿಬ್ಬರ ಹತ್ಯೆ - ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಮೃತರ ಕುಟುಂಬಸ್ಥರಿಂದ ಹೆದ್ದಾರಿ ತಡೆ- ಸ್ಥಳಕ್ಕೆ ಸಚಿವ ಎಂಟಿಬಿ ನಾಗರಾಜ್ ಭೇಟಿ

ಸಚಿವ ಎಂಟಿಬಿ ನಾಗರಾಜ್​
ಸಚಿವ ಎಂಟಿಬಿ ನಾಗರಾಜ್​
author img

By

Published : Feb 18, 2023, 4:23 PM IST

ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ಕ್ರಿಕೆಟ್ ಪಂದ್ಯಾವಳಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಇಬ್ಬರು ಯುವಕರನ್ನ ಹತ್ಯೆ ಮಾಡಿರುವ ಘಟನೆ ಶುಕ್ರವಾರದಂದು ಇಲ್ಲಿಯ ದೊಡ್ಡಬೆಳವಂಗಲಾ ಗ್ರಾಮದಲ್ಲಿ ನಡೆದಿತ್ತು. ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ಮೃತ ಯುವಕರ ಕುಟುಂಬಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಮೃತ ಯುವಕರ ಮನೆಗೆ​ ಭೇಟಿ ನೀಡಿ ಯುವಕರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ 24 ಗಂಟೆಯಲ್ಲಿ ಆರೋಪಿಗಳನ್ನ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವರು ಪ್ರತಿಭಟನಾನಿರತ ಗ್ರಾಮಸ್ಥರನ್ನು ಉದ್ದೇಶಿಸಿ ಮಾಧ್ಯಮದೊಂದಿಗೆ ಮಾತನಾಡಿದರು. ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ರೀತಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಈ ಹಿಂದೆ ಯಾವತ್ತೂ ನಡೆದಿರಲಿಲ್ಲ. ಪೊಲೀಸರು ನಿಷ್ಪಕ್ಷಪಾತವಾಗಿ ಈ ಪ್ರಕರಣದ ತನಿಖೆಯನ್ನು ಮಾಡಲಿದ್ದಾರೆ. ಕೃತ್ಯ ಎಸಗಿದವರು ಪ್ರಭಾವಿಗಳಾಗಿರಿಲಿ, ಯಾರೇ ಆಗಿರಲಿ.. ಅವರನ್ನ 24 ಗಂಟೆಯೊಳಗೆ ಬಂಧಿಸಿ ಕ್ರಮ ಕೈಗೊಳ್ಳುವ ಮೂಲಕ ಮೃತ ಯುವಕರ ಸಾವಿಗೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಅಮಾಯಕ ಯುವಕರನ್ನು ಹತ್ಯೆ ಮಾಡಿರುವುದು ನೋವಿನ ಸಂಗತಿಯಾಗಿದೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ. ಒಂದು ವೇಳೆ ಸರ್ಕಾರದಿಂದ ಪರಿಹಾರ ನೀಡಲು ಅವಕಾಶವಿಲ್ಲದಿದ್ದರೆ ನಾವೇ ಪರಿಹಾರ ನೀಡುತ್ತೇವೆ. ಕೊಲೆಯ ಹಿಂದಿನ ಉದ್ದೇಶ ಏನು ಮತ್ತು ಇದರ ಹಿಂದೆ ಯಾವ ಕಾಣದ ಕೈಗಳ ಕೈವಾಡವಿದೆ ಮತ್ತು ಕೊಲೆ ಮಾಡಲು ಅವರಿಗೆ ಧೈರ್ಯ ತುಂಬಿದವರು ಯಾರು ಎಂಬುವುದೆಲ್ಲದರ ಬಗ್ಗೆ ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆಯಾಗುವ ಕೆಲಸವನ್ನು ಮಾಡುತ್ತಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವುದು ಪೊಲೀಸರ ಜವಾಬ್ದಾರಿಯಾಗಿದೆ ಎಂದರು. ಸ್ಥಳಕ್ಕೆ ಆಗಮಿಸಿದ ಸಚಿವರು ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಪ್ರಕರಣದ ಹಿನ್ನೆಲೆ: ಇಲ್ಲಿಯ ದೊಡ್ಡಬೆಳವಂಗಲ ಗ್ರಾಮದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿತ್ತು. ಪಂದ್ಯಾವಳಿ ವೇಳೆ ಮೈದಾನದಲ್ಲಿ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಹಾಗೂ ಹುಲಿಕುಂಟೆ ಗ್ರಾಮದ ಯುವಕರ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಜಗಳ ತಾರಕಕ್ಕೇರಿ ಎರಡು ಗುಂಪುಗಳ ನಡುವೆ ಮಾರಾಮಾರಿ ಉಂಟಾಗಿತ್ತು. ಈ ವೇಳೆ ಚಾಕುವಿನಿಂದ ದೊಡ್ಡಬೆಳವಂಗಲದ ಭರತ್ (23) ಹಾಗು ಪ್ರತೀಕ್ (17) ಎಂಬ ಯುವಕರ ಹೊಟ್ಟೆ ಮತ್ತು ಗುಪ್ತಾಂಗಕ್ಕೆ ಇರಿಯಲಾಗಿತ್ತು. ನಂತರ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದರು.

ಇದನ್ನೂ ಓದಿ: ರಾಮನಗರ: ಪ್ರೀತಿ ನಿರಾಕರಿಸಿದ್ದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್​ ಎರಚಿದ್ದ ಮೆಕ್ಯಾನಿಕ್​ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.