ETV Bharat / state

ಕುಡಿದ ಮತ್ತಿನಲ್ಲಿ ಜಾಲಿ ರೈಡ್: ಲಾರಿಗೆ ಬೈಕ್​​ ಡಿಕ್ಕಿ ಹೊಡೆದು ಮೂವರು ಯುವಕರು ಸಾವು

ಶನಿವಾರ ತಡರಾತ್ರಿ ಹೊಸಕೋಟೆ ಟೋಲ್​ ಗೇಟ್ ಬಳಿ ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಯುವಕರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Drunken youths go on jolly ride: Three youth die after colliding with lorry
ಕುಡಿದ ಮತ್ತಿನಲ್ಲಿ ಜಾಲಿರೈಡ್: ಲಾರಿಗೆ ಡಿಕ್ಕಿ ಹೊಡೆದು ಮೂವರು ಯುವಕರು ಸಾವು
author img

By

Published : Dec 21, 2020, 5:42 PM IST

ಹೊಸಕೋಟೆ: ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಶನಿವಾರ ತಡರಾತ್ರಿ ಹೊಸಕೋಟೆ ಟೋಲ್​ ಗೇಟ್ ಬಳಿ ನಡೆದಿದೆ.

ಹೊಸಕೋಟೆಯ ನಿವಾಸಿಗಳಾದ ರಾಜೇಶ್(21), ಲವನಿತ್ (22) ಹಾಗೂ ಹರೀಶ್ (21) ಮೃತಪಟ್ಟ ಯುವಕರು. ಸಣ್ಣಪುಟ್ಟ ಕೂಲಿ ಕೆಲಸ ಮಾಡಿಕೊಂಡಿದ್ದ ಈ ಮೂವರು ರಾತ್ರಿ 12.30ರವರೆಗೆ ಪಾರ್ಟಿ ಮಾಡಿ, ಕಂಠಪೂರ್ತಿ ಕುಡಿದು ಹೊಂಡಾ ಅಕ್ಟೀವಾ ಸ್ಕೂಟರ್​​ನಲ್ಲಿ ಜಾಲಿ ರೈಡ್ ಹೋಗಿದ್ದರಂತೆ.

ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಯುವಕರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೆಲ್ಮೆಟ್ ಹಾಕದೇ ಇದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರಿಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.