ನೆಲಮಂಗಲ (ಬೆಂಗಳೂರು ಗ್ರಾಮಾಂತರ): ತಾಲೂಕಿನ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ, ಸೋಂಕು ಹರಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.
ಮೊದಲಿಗೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಸಚಿವರು, ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನ ವೀಕ್ಷಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ನಂತರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೂ ಭೇಟಿ ಕೊಟ್ಟರು.