ETV Bharat / state

ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ: ಪೈಪೋಟಿಗೆ ಬಿದ್ದು ಪ್ರತಿಭಟನೆ ನಡೆಸಿದ ಕಾಂಗ್ರೆಸ್-ಬಿಜೆಪಿ - ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ

ಕೊರೊನಾ ಸಮಯದಲ್ಲಿ ಮನೆಯಲ್ಲಿದ್ದ ಶಾಸಕರು ನಗರಸಭೆ ಚುನಾವಣೆ ಸನಿಹ ಇರುವ ಕಾರಣಕ್ಕೆ ನಾಗರಿಕರ ಕೊಂದು ಕೊರತೆ ಸಭೆ ಮತ್ತು ಕಾಮಗಾರಿಗಳ ಶಂಕುಸ್ಥಾಪನೆ ಮಾಡುತ್ತಿದ್ದಾರೆ ಎನ್ನುವುದು ಬಿಜೆಪಿ ಕಾರ್ಯಕರ್ತರ ವಾದವಾಗಿದೆ.

municipality-bjp-congress-protest
ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ
author img

By

Published : Jan 22, 2021, 3:55 PM IST

ದೊಡ್ಡಬಳ್ಳಾಪುರ: ಕೆಲವೇ ದಿನಗಳಲ್ಲಿ ನಗರಸಭೆ ಚುನಾವಣೆ ಘೋಷಣೆಯಾಗಲಿದ್ದು, ರಾಜಕೀಯ ಕೆಸರೆರಚಾಟ ಈಗಾಗಲೇ ಶುರುವಾಗಿದೆ. ಏಕಕಾಲದಲ್ಲಿ ನಗರಸಭೆಯ ಎರಡು ಬದಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಪ್ರತಿಭಟನೆಯಲ್ಲೂ ಪೈಪೋಟಿ ನಡೆಸಿದರು.

ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ

ಓದಿ: ಶಿವಮೊಗ್ಗದಲ್ಲಿ ಮಹಾ ಸ್ಫೋಟ... ಜವರಾಯನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಮಲೆನಾಡು!

ದೊಡ್ಡಬಳ್ಳಾಪುರ ನಗರಸಭೆ ಚುನಾವಣೆಯ ದಿನಾಂಕ ಕೆಲವೇ ದಿನಗಳಲ್ಲಿ ಘೋಷಣೆಯಾಗಲಿದೆ. ನಗರಸಭೆಯ ಆಡಳಿತ ಹಿಡಿಯಲು ಕಣ್ಣಿಟ್ಟಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜಕೀಯ ಕೆಸರೆರಚಾಟ ಆರಂಭಿಸಿವೆ. ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ನಗರ ವ್ಯಾಪ್ತಿಯಲ್ಲಿ ಕಾಮಗಾರಿಗಳ ಶಂಕುಸ್ಥಾಪನೆ ಆರಂಭಿಸಿದ್ದಾರೆ. ಏಕಪಕ್ಷೀಯವಾಗಿ ಕೇವಲ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಕಾಮಾಗಾರಿ ಶಂಕುಸ್ಥಾಪನೆ ಆರಂಭಿಸಿದ್ದಾರೆ.

ಕಾರ್ಯಕ್ರಮದ ಶಿಷ್ಟಾಚಾರವನ್ನು ಗಾಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಂಸದ ಬಚ್ಚೇಗೌಡ ಮತ್ತು ಬಿಜೆಪಿಯ ವಿಧಾನ ಪರಿಷತ್ ಸದಸ್ಯರಿಗೂ ಆಹ್ವಾನ ಕೊಡದೆ ಕೇವಲ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಕಾಮಾಗಾರಿಗಳ ಶಂಕುಸ್ಥಾಪನೆ ಮಾಡುತ್ತಿದ್ದಾರೆ.

ಕೊರೊನಾ ಸಮಯದಲ್ಲಿ ಮನೆಯಲ್ಲಿದ್ದ ಶಾಸಕರು ನಗರಸಭೆಯ ಚುನಾವಣೆ ಸನಿಹ ಇರುವ ಕಾರಣಕ್ಕೆ ನಾಗರಿಕರ ಕೊಂದು ಕೊರತೆ ಸಭೆ ಮತ್ತು ಕಾಮಾಗಾರಿಗಳ ಶಂಕುಸ್ಥಾಪನೆ ಮಾಡುತ್ತಿದ್ದಾರೆ ಎನ್ನುವುದು ಬಿಜೆಪಿ ಕಾರ್ಯಕರ್ತರ ಆರೋಪವಾಗಿದೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಪೈಪೋಟಿ ನೀಡಲು ಕಾಂಗ್ರೆಸ್ ಕಾರ್ಯಕರ್ತರು ಸಹ ನಗರಸಭೆಯ ಮತ್ತೊಂದು ಬದಿಯಲ್ಲಿ ಪ್ರತಿಭಟನೆ ನಡೆಸಿದರು. ದೊಡ್ಡಬಳ್ಳಾಪುರ ವಿಧಾನಸಭೆಗೆ ಬಿಡುಗಡೆಯಾದ ಅನುದಾನ ತಡೆಹಿಡಿಯುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಪಕ್ಷ ಕಾರಣವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನನಿರತ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಕಾರ್ಯಕ್ರಮದ ಶಿಷ್ಟಾಚಾರ ಮಾಡೋದು ಅಧಿಕಾರಿಗಳು. ಇದರಲ್ಲಿ ನನ್ನ ಪಾತ್ರವೇನು ಇಲ್ಲ. ಕೊರೊನಾ ಹಿನ್ನೆಲೆ ಸಿಮೀತ ಜನರ ನಡುವೆ ಕಾರ್ಯಕ್ರಮ ಮಾಡುವುದರಿಂದ ಕೆಲವೇ ಜನರ ಸಮ್ಮುಖದಲ್ಲಿ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದೆಂದು ಶಾಸಕರು ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.