ETV Bharat / state

52 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಬೆಂಗಳೂರು ಗ್ರಾ. ಜಿಲ್ಲೆಯ13,192 ವಿದ್ಯಾರ್ಥಿಗಳು - bagalore latest news

ದೇವನಹಳ್ಳಿ ತಾಲೂಕಿನಲ್ಲಿ 12, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲೂಕಿನಲ್ಲಿ 12 ಹಾಗೂ ನೆಲಮಂಗಲ ತಾಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ
ಎಸ್​ಎಸ್​ಎಲ್​ಸಿ ಪರೀಕ್ಷೆ
author img

By

Published : Jun 25, 2020, 3:36 AM IST

ದೇವನಹಳ್ಳಿ : ಎಸ್ಎಸ್ಎಲ್​ಸಿ ಪರೀಕ್ಷೆಯು ಇಂದಿನಿಂದ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಹೊರ ಜಿಲ್ಲೆಯ 65 ವಿದ್ಯಾರ್ಥಿಗಳು ಸೇರಿದಂತೆ 13,192 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಲಿದ್ದು, ಜಿಲ್ಲೆಯ 125 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯಲ್ಲಿ 12,693 ಸಾಮಾನ್ಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು , 294 ವಿದ್ಯಾರ್ಥಿಗಳು ಪುನರ್ ಪರೀಕ್ಷೆ ಮತ್ತು 205 ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಒಟ್ಟಾರೆ 13,192 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ದೇವನಹಳ್ಳಿ ತಾಲೂಕಿನಲ್ಲಿ 12, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 14, ಹೊಸಕೋಟೆ ತಾಲೂಕಿನಲ್ಲಿ 12 ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಉಳಿದಂತೆ ಪರೀಕ್ಷಾ ಕೇಂದ್ರಗಳನ್ನು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ತೆರೆಯಲಾಗಿದೆ.

52 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಬೆಂಗಳೂರು ಗ್ರಾ. ಜಿಲ್ಲೆಯ13,192 ವಿದ್ಯಾರ್ಥಿಗಳು

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪೆನ್, ಇತರೆ ಲೇಖನ ಸಾಮಗ್ರಿಗಳು ಸೇರಿದಂತೆ ಕುಡಿಯುವ ನೀರನ್ನು ವಿದ್ಯಾರ್ಥಿಗಳೇ ತರಬೇಕು. ಬೇರೆ ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ. ಥರ್ಮಲ್ ಸ್ಕ್ರೀನಿಂಗ್ ಮೂಲಕ ಪ್ರತಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದ ನಂತರವೇ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.