ETV Bharat / state

ದೊಡ್ಡಬಳ್ಳಾಪುರದಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ: 10 ಲೀಟರ್​ ಸೇಂದಿ ವಶ - Excise Department Operation in doddaballapur

ದೊಡ್ಡಬಳ್ಳಾಪುರದ ತೂಬಗೆರೆ ಹೋಬಳಿ ಗೆದ್ದಲಪಾಳ್ಯದಲ್ಲಿ ಅಕ್ರಮವಾಗಿ ಸೇಂದಿ ಮಾರುತ್ತಿದ್ದ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 10 ಲೀಟರ್ ಸೇಂದಿಯನ್ನು ವಶಪಡಿಸಿಕೊಂಡಿದ್ದಾರೆ.

Excise Department Operation in doddaballapur
ದೊಡ್ಡಬಳ್ಳಾಪುರದಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ: 10 ಲೀ. ಸೇಂದಿ ವಶಕ್ಕೆ
author img

By

Published : Apr 21, 2020, 9:14 PM IST

ದೊಡ್ಡಬಳ್ಳಾಪುರ: ತೂಬಗೆರೆ ಹೋಬಳಿ ಗೆದ್ದಲಪಾಳ್ಯದಲ್ಲಿ ಅಕ್ರಮವಾಗಿ ಸೇಂದಿ ಮಾರುತ್ತಿದ್ದ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.

ಮುನಿರಾಜು ಬಂಧಿತ ಆರೋಪಿ. ಅಕ್ರಮವಾಗಿ ಸೇಂದಿ ಮಾರುತ್ತಿರುವ ಬಗ್ಗೆ ಸಾರ್ವಜನಿಕರ ಮಾಹಿತಿಯನ್ನಾಧರಿಸಿ ಅಬಕಾರಿ ಇಲಾಖೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 10 ಲೀಟರ್ ಸೇಂದಿ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾ. 24ರಿಂದ ಏ. 19ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಸಿದ ಕಾರ್ಯಾಚರಣೆಯಿಂದಾಗಿ 225 ದಾಳಿ ನಡೆಸಿ, 5 ಪ್ರಕರಣ ಪತ್ತೆ ಹಚ್ಚಲಾಗಿದೆ. 12,780 ಲೀಟರ್ ಭಾರತೀಯ ತಯಾರಿಕಾ ಮದ್ಯ ಮತ್ತು 3,250 ಲೀಟರ್ ಬಿಯರ್​ ಜಪ್ತಿ ಮಾಡಿ 1 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಲಾಗಿದೆ.

ದೀರ್ಘಾವಧಿಗೆ ಮದ್ಯದ ಅಂಗಡಿಗಳನ್ನು ಮುಚ್ಚಿರುವ ಹಿನ್ನೆಲೆಯಲ್ಲಿ ಮದ್ಯ ವ್ಯಸನಿಗಳು ಇತರೆ ಮಾದಕ ವಸ್ತುಗಳಾದ ರಾಸಾಯನಿಕ ಮಿಶ್ರಿತ ಸೇಂದಿ, ಕಳ್ಳಭಟ್ಟಿ, ನಕಲಿ ಮದ್ಯ, ಗಾಂಜಾ, ಹ್ಯಾಂಡ್ ಸ್ಯಾನಿಟೈಸರ್ ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಸಾವು ನೋವು ಸಂಭವಿಸುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಸಾರ್ವಜನಿಕರು ಇಂತಹ ಯಾವುದೇ ಅಕ್ರಮ ಮಾರಾಟದ ಬಗ್ಗೆ ಮಾಹಿತಿಯನ್ನು ಅಬಕಾರಿ ಇಲಾಖೆಗೆ ನೀಡುವ ಮೂಲಕ ಸಾರ್ವಜನಿಕರ ಆರೋಗ್ಯ ಮತ್ತು ಸಾವು ನೋವು ತಪ್ಪಿಸುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಗೆ ಸಹಕರಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.