ದೊಡ್ಡಬಳ್ಳಾಪುರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಇಡೀ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಸೇರಿದಂತೆ ಅವರ ಅಭಿಮಾನಿಗಳು ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದು, ತಾಲೂಕಿನಲ್ಲಿ ಡಿಕೆಶಿ ಅಭಿಮಾನಿಗಳ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಭಾನುವಾರ ಬೆಳಿಗ್ಗೆ ತಾಲೂಕಿನ ಕೈಗಾರಿಕಾ ಪ್ರದೇಶದ ಬ್ಯಾಂಕ್ ವೃತ್ತದಲ್ಲಿ ಬೆಂಗಳೂರು ಹಿಂದೂಪುರ ಹೆದ್ದಾರಿ ಮಾರ್ಗದಲ್ಲಿ ಜಮಾಯಿಸಿದ ಅಭಿಮಾನಿಗಳು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಜೊತೆಗೆ ಅಮಿತ್ ಶಾ ಹಾಗೂ ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಭಿಮಾನಿಗಳು, ಡಿಕೆಶಿ ಬಂಧನವನ್ನು ಖಂಡಿಸಿದರು. ಡಿಕೆಶಿಯನ್ನು ರಿಲೀಸ್ ಮಾಡುವಂತೆ ಒತ್ತಾಯಿಸಿದರು.
ಇನ್ನು ಡಿಕೆಶಿ ಬಂಧನ ಖಂಡಿಸಿ ಮಾತನಾಡಿದ ಸಂಘದ ಅಧ್ಯಕ್ಷ ಲೋಹಿತ್, ತನಿಖೆಗೆ ಸಹಕರಿಸಿದ್ದರೂ ಇಡಿ ಅಧಿಕಾರಿಗಳು ಡಿಕೆಶಿಯನ್ನು ಯಾಕೆ ಬಂಧಿಸಿದ್ರು? ಈ ಹಿಂದೆ ಗುಜರಾತ್ ಎಂಎಲ್ಎಗಳನ್ನು ರಕ್ಷಣೆ ಮಾಡಿದ ಕಾರಣ ಡಿ.ಕೆ.ಶಿವಕುಮಾರ್ ಮೇಲೆ ಸೇಡಿನ ರಾಜಕಾರಣ ಬಿಜೆಪಿ ಮಾಡುತ್ತಿದೆ ಅಂತಾ ಆಕ್ರೋಶ ಹೊರಹಾಕಿದರು.