ದೊಡ್ಡಬಳ್ಳಾಪುರ: ಕೃಷಿ ಕಾಯ್ದೆ ತಿದ್ದುಪಡಿ ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ ರೈತರು ಕೈಯಲ್ಲಿ ದೊಣ್ಣೆ ಹಿಡಿದು ಮೆರವಣಿಗೆ ನಡೆಸಿದರು. ನಂತರ ಸರ್ಕಾರ ಸತ್ತಿದೆ ಎಂದು ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತರು ಮನವಿ ಪತ್ರದ ಬದಲಿಗೆ ದೊಣ್ಣೆಯನ್ನು ನೀಡಿ ಎಚ್ಚರಿಕೆ ಸಂದೇಶ ರವಾನೆ ಮಾಡಿದರು. ರೈತರ ಸಮಸ್ಯೆಗಳನ್ನು ಆಲಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರ ಸತ್ತು ಹೋಗಿದೆ ಎಂದು ಬಾಯಿ ಬಡಿದುಕೊಂಡು ರೈತರು ತಮ್ಮ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಭಾಗಿಯಾಗಿ ರೈತರ ಪ್ರತಿಭಟನೆಗೆ ಬೆಂಬಲ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ರೈತರು ಮತ್ತು ಕಾರ್ಮಿಕರಿಗೆ ಅನ್ಯಾಯವಾದಾಗ ಹೋರಾಟ ನಡೆಸುತ್ತಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ತಿದ್ದುಪಡಿಗಳು ರೈತರಿಗೆ ಮಾರಕವಾಗಿದ್ದು ಕಳೆದು ನಾಲ್ಕು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ರೈತರ ಸಮಸ್ಯೆಯನ್ನ ಅಲಿಸಿಲ್ಲವೆಂದು ಸರ್ಕಾರದ ವಿರುದ್ಧ ವಾಗ್ಥಳಿ ನಡೆಸಿದರು.