ಬೆಂ.ಗ್ರಾಮಾಂತರ: ದೇವನಹಳ್ಳಿ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸರ್ವೇ ನಂಬರ್ 134ರ ಜಮೀನನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರದ ಈ ಕ್ರಮ ಖಂಡಿಸಿ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ, ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.