ETV Bharat / state

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಹೊತ್ತಿ ಉರಿದ ಜಾಗ್ವಾರ್ : ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ...

author img

By

Published : Nov 22, 2020, 8:53 PM IST

Updated : Nov 22, 2020, 9:22 PM IST

ರಾಷ್ಟ್ರೀಯ ಹೆದ್ದಾರಿ 4 ರ ಮಾದವಾರದ ಬಳಿಯ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದ ಬಳಿ ಚಲಿಸುತ್ತಿದ್ದ ಜಾಗ್ವಾರ್ ಕಾರಿನಲ್ಲಿ  ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.

fire-in-a-jaguar-car-near-nelamangala
ಹೊತ್ತಿ ಉರಿದ ಜಾಗ್ವಾರ್

ನೆಲಮಂಗಲ: ಚಲಿಸುತ್ತಿದ್ದ ಜಾಗ್ವಾರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರ ಮಾದವಾರದ ಬಳಿಯ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದ ಬಳಿ ನಡೆದಿದೆ.

ಹೊತ್ತಿ ಉರಿದ ಜಾಗ್ವಾರ್

ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಜಾಗ್ವಾರ್ ಕಾರಿನ ಮುಂಭಾಗದ ಬಾನೇಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ರಸ್ತೆಯಲ್ಲಿ ಕಾರು ನಿಲ್ಲಿಸಿ ಪರಿಶೀಲಿಸಿದಾಗ ಬೆಂಕಿಯ ತೀವ್ರತೆ ಹೆಚ್ಚಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಠವಶಾತ್​​ ಕಾರಿನಲ್ಲಿದ್ದವರಿಗೆ ಯಾವುದೇ ರೀತಿಯ ಅನಾಹುತವಾಗಿಲ್ಲ ಎಂದು ತಿಳಿದು ಬಂದಿದೆ.

ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಕಷ್ಟ ಪಡುವಂತಾಯಿತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Nov 22, 2020, 9:22 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.