ದೊಡ್ಡಬಳ್ಳಾಪುರ: ಚೈತನ್ಯ ನಗರದ 4ನೇ ಕ್ರಾಸ್ನಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ದೊಡ್ಡಬಳ್ಳಾಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದೆ.
ಬೆಂಗಳೂರಿನ ಕೊರೊನಾ ಚಿಕಿತ್ಸಾ ಕೇಂದ್ರಗಳಾದ ವಿಕ್ಟೋರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಜಾಗವಿಲ್ಲದ ಕಾರಣ ಸರ್ಕಾರದ ಆದೇಶದ ಮೇರೆಗೆ ಈ ಮುಂಚೆಯೇ ಸಿದ್ಧತೆ ಮಾಡಿಕೊಂಡಿದ್ದ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಇಂದಿನಿಂದ ಆರಂಭವಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ. ಸೀಲ್ ಡೌನ್ ಮಾಡಲಾಗಿರುವ ಚೈತನ್ಯ ನಗರ ನಿವಾಸಿಗಳು ಸರ್ಕಾರದ ನಿಯಮ ಪಾಲಿಸುವಂತೆ ಮತ್ತು ಕೊರೊನಾ ವಾರಿಯರ್ಸ್ ಜೊತೆ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.