ಬೆಂಗಳೂರು: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾವಿರಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಪ್ರಾರಂಭವಾಗಿ ಹಲವು ವರ್ಷಗಳು ಕಳೆದರೂ ಒಂದೇ ಒಂದು ಕಂಪ್ಯೂಟರ್ ಇರಲಿಲ್ಲ. ಇದೀಗ ಕೇಂದ್ರ ಸರ್ಕಾರದಿಂದ 30 ಕಂಪ್ಯೂಟರ್ಗಳು ಅನುದಾವಾಗಿ ಬಂದಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಫೀಸ್ ಪಡೆಯದೇ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ.
ಕಾಲೇಜಿನಲ್ಲಿಂದು ಕಂಪ್ಯೂಟರ್ಗಳನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ ಬಿಡುಗಡೆ ಮಾಡಿರು. ಅಲ್ಲದೇ ಈ ಕಂಪ್ಯೂಟರ್ಗಳನ್ನು ಇಡಲು ಕಾಲೇಜಿನಲ್ಲಿ ಸ್ಥಳಾವಕಾಶ ಇಲ್ಲದಿರುವುದನ್ನು ಕಂಡ ಶಾಸಕರು, ಸದ್ಯದಲ್ಲೇ ಕಂಪ್ಯೂಟರ್ ತರಬೇತಿಗಾಗಿ ಕಟ್ಟಡದ ವ್ಯವಸ್ಥೆ ಮಾಡಲಾಗುವುದು ಎಂದರು.
ಇದೇ ವೇಳೆ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉಚಿತವಾಗಿ ಕಂಪ್ಯೂಟರ್ ಸೇವೆಯ ಸದುಪಯೋಗಪಡಿಸಿಕೊಳ್ಳಬಹುದು. ಇದಕ್ಕಾಗಿ ಕಾಲೇಜಿನಲ್ಲಿಯೇ ಒಬ್ಬ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದರು.