ಹೊಸಕೋಟೆ: ಉಪಚುನಾವಣೆಯಲ್ಲಿ ಬಿಜೆಪಿಯವರು 8 ಸಾವಿರ ಕೊಟ್ಟರೂ ತೆಗೆದುಕೊಳ್ಳಿ ಆದರೆ, ಕಾಂಗ್ರೆಸ್ಗೆ ದ್ರೋಹ ಬಗೆದ ಅನರ್ಹ ಶಾಸಕ ಎಂಟಿಬಿ ನಾಗರಾಜ್ಗೆ ತಕ್ಕ ಪಾಠ ಕಲಿಸಿ ಮಾಜಿ ಸಚಿವ ಕೃಷ್ಣಬೈರೇಗೌಡ ಹೇಳಿಕೆ ನೀಡಿದ್ದಾರೆ.
ಹೊಸಕೋಟೆಯಲ್ಲಿ ಅಕ್ಟೋಬರ್ 8ರಂದು ಕಾಂಗ್ರೆಸ್ ತಾಲೂಕು ಕಚೇರಿ ಉದ್ಘಾಟಿಸಿ ಅವರು ಮಾತನಾಡಿ, ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿ, ಭೈರತಿ ಸುರೇಶ್ ಪತ್ನಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯಾರದೋ ದುಡ್ಡು, ಯಲ್ಲಮ್ಮನ ಜಾತ್ರೆ ಮಾಡುತ್ತಿರುವವರಿಗೆ ಸ್ವಾಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ತಾಕತ್ತು ಏನೆಂಬುದು ತೋರಿಸಬೇಕು. ಗುರುವಾರದಿಂದ ಗ್ರಾಮ ಮಟ್ಟದಲ್ಲಿ ಸಭೆ ನಡೆಸಲಾಗುವುದು ಎಂದರು.