ಬೆಂಗಳೂರು : ಮೂವರು ಐಎಎಸ್ ಅಧಿಕಾರಿಗಳು ಹಾಗೂ ಒಬ್ಬರು ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.
ಕಬ್ಬು ಅಭಿವೃದ್ಧಿ ಆಯುಕ್ತ ಮತ್ತು ಸಕ್ಕರೆ ನಿರ್ದೇಶಕರಾಗಿರುವ ಅಕ್ರಂ ಪಾಷಾರಿಗೆ ಕಾರ್ಮಿಕ ಇಲಾಖೆ ಆಯುಕ್ತರ ಹೆಚ್ಚುವರಿ ಹೊಣೆ ನೀಡಲಾಗಿದೆ. ಐಎಫ್ಎಸ್ ಅಧಿಕಾರಿ ಮಹೇಶ್ ಶಿರೂರ್ರನ್ನು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.