ETV Bharat / state

ಹೊಸಕೋಟೆ ಬಳಿ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಸಾವು, ಇಬ್ಬರು ಗಂಭೀರ - Four students killed due road accident near Bengaluru

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Four students killed due road accident near Bengaluru
ಹೊಸಕೋಟೆ ಬಳಿ ಭೀಕರ ರಸ್ತೆ ಅಪಘಾತ
author img

By

Published : Feb 16, 2022, 2:19 PM IST

ಹೊಸಕೋಟೆ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಅತಿವೇಗದಿಂದ ಚಲಿಸುತ್ತಿದ್ದ ಕಾರು ಡಿವೈಡರ್​​ಗೆ ಡಿಕ್ಕಿಯಾಗಿ ಬಳಿಕ ಲಾರಿಗೆ ಗುದ್ದಿದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆಯಿತು. ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್​​ಗೆ ಗುದ್ದಿ, ಬಳಿಕ ಲಾರಿಗೆ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.

ಮೃತ ವಿದ್ಯಾರ್ಥಿಗಳೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನಲ್ಲಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರನ್ನು ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಾದ ಸಿರಿಕೃಷ್ಣ ಮತ್ತು ಅಂಕಿತಾ ರೆಡ್ಡಿ ಸ್ಥಿತಿ ಗಂಭೀರವಾಗಿದ್ದು ಹೊಸಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿದ್ಯಾರ್ಥಿಗಳು ಜಾಲಿ ರೈಡ್‌ಗೆಂದು ತೆರಳಿ, ವಾಪಸ್ ಆಗುತ್ತಿದ್ದರೆಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಠಾಣೆ ಸಿಪಿಐ ಮಂಜುನಾಥ್ ಸ್ಥಳ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಕಾರು-ಟ್ರಕ್​ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.