ಹೊಸಕೋಟೆ(ಬೆಂಗಳೂರು ಗ್ರಾಮಾಂತರ): ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ. ಸ್ಥಳಕ್ಕೆ ಸಚಿವ ಎಂಟಿಬಿ ನಾಗರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮನೋಜ್ ಕುಮಾರ್ ಸದಯ್, ರಾಮ್ ಕುಮಾರ್ ಸದಯ್ , ನಿತೀಶ್ ಕುಮಾರ್ ಸದೆಯ್, ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಸುನಿಲ್ ಮಂಡಲ್, ಶಂಭು ಮಂಡಲ್, ದಿಲೀಪ್, ದುರ್ಗೇಶ್ ವರ್ಷ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಡಿವೈಎಸ್ಪಿ ಉಮಾಶಂಕರ್ ಹಾಗೂ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ಪರಿಶೀಲಿಸಿದರು.
ಅಪಾರ್ಟ್‌ಮೆಂಟ್ ಪಕ್ಕದಲ್ಲಿಯೇ ಕಾರ್ಮಿಕರು ಶೆಡ್‌ಗಳಲ್ಲಿ ವಾಸವಾಗಿದ್ದರು. ಗೋಡೆ ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ್ದ ಶೆಡ್ ಮೇಲೆಯೇ ಕುಸಿದು ಬಿದ್ದಿದೆ. ಒಟ್ಟು 8 ಕಾರ್ಮಿಕರು ಮಲಗಿದ್ದರು. ಬಾರಿ ಮಳೆಯಿಂದ ಅಪಾರ್ಟ್‌ಮೆಂಟ್ ಗೋಡೆ ಕುಸಿದಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ನಾಲ್ಕು ಕಾರ್ಮಿಕರನ್ನು ಸ್ಥಳೀಯರು ರಕ್ಷಿಸಿ ವೈಟ್ ಫೀಲ್ಡ್ ನ ವೈದೇಹಿ ಆಸ್ಪತ್ರೆ ದಾಖಲಿಸಿದ್ದಾರೆ.
ದುರಂತಕ್ಕೆ ಕಾರಣರಾದವರ ಮೇಲೆ ಪ್ರಕರಣ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಹಾಗೆ ರಾಜಕಾಲುವೆ ಒತ್ತುವರಿ ಆರೋಪ ಕೇಳಿ ಬಂದ ಹಿನ್ನೆಲೆ ರಾಜಕಾಲುವೆಗಳ ಬಗ್ಗೆಯೂ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಲ್ ಗೇಟ್ಸ್ ಮೀರಿಸಿದ ಗೌತಮ್ ಅದಾನಿ.. ಜಗತ್ತಿನ ನಾಲ್ಕನೇ ಶ್ರೀಮಂತ ವ್ಯಕ್ತಿ ಪಟ್ಟ